ಪ್ರಕಾಶ್ ಎಂ. ಚನ್ನಪ್ಪನವರ್
ಭದ್ರಾವತಿ: ಬಹಳ ದಿನಗಳಿಂದ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಬೇರೆಡೆಗೆ ವರ್ಗಾವಣೆಗೊಳ್ಳುವ ವದಂತಿ ಕೇಳಿ ಬರುತ್ತಿತ್ತು. ಇದೀಗ ಸರ್ಕಾರ ಇವರನ್ನು ಶಿರಸಿ ನಗರಸಭೆಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ಕೆಲವು ದಿನಗಳ ಹಿಂದೆಯೇ ಸರ್ಕಾರ ಇವರ ವರ್ಗಾವಣೆ ಆದೇಶ ಹೊರಡಿಸಿದ್ದು, ಶನಿವಾರ ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್‌ರವರು ಅಧಿಕಾರ ಸ್ವೀಕರಿಸಿದ ಹಿನ್ನಲೆಯಲ್ಲಿ ಪ್ರಕಾಶ್ ಎಂ. ಚನ್ನಪ್ಪನವರ್ ಸೋಮವಾರ ಶಿರಸಿ ನಗರಸಭೆಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಪಿ.ಎಂ ಚನ್ನಪ್ಪನವರ್ ಸವದತ್ತಿ ಪುರಸಭೆ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಪೌರಾಯುಕ್ತರ ಹುದ್ದೆಗೆ ಮುಂಬಡ್ತಿಪಡೆದು ಇಲ್ಲಿಗೆ ವರ್ಗಾವಣೆಗೊಂಡಿದ್ದರು. ಸುಮಾರು ೧೯ ತಿಂಗಳು ಕರ್ತವ್ಯ ನಿರ್ವಹಿಸಿದ್ದು, ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ