ನೀಲಕಂಠನ್
ಭದ್ರಾವತಿ : ತಾಲೂಕು ವನ್ನಿಯರ್ ತಮಿಳು ಗೌಂಡರ್ ಸಮಾಜದ ಮಾಜಿ ಅಧ್ಯಕ್ಷ, ದಲಿತ ಮುಖಂಡ ನೀಲಕಂಠನ್(೬೨) ಭಾನುವಾರ ರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಮತ್ತು ಸಹೋದರರು ಇದ್ದಾರೆ. ನಗರಸಭೆ ವ್ಯಾಪ್ತಿಯ ಗಾಂಧಿನಗರದ ಕೇಶಪುರ ಬಡಾವಣೆಯಲ್ಲಿ ವಾಸವಾಗಿದ್ದರು. ನೀಲಕಂಠನ್‌ರವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮನೆ ದೇವರ ಪೂಜೆ ಸಲ್ಲಿಸಲು ತಮಿಳುನಾಡಿಗೆ ತೆರಳಿ ಮರಳುತ್ತಿದ್ದಾಗ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತವಾಗಿದ್ದು, ಮೃತದೇಹವನ್ನು ನಗರಕ್ಕೆ ತರಲಾಗಿದೆ. ಮಂಗಳವಾರ ಮಧ್ಯಾಹ್ನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಇವರ ನಿಧನಕ್ಕೆ ವನ್ನಿಯರ್ ತಮಿಳು ಗೌಂಡರ್ ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಮೊದಲಿಯಾರ್ ಸಮಾಜದ ಪ್ರಮುಖರಾದ ಹಿರಿಯ ಪತ್ರಕರ್ತ ಕಣ್ಣಪ್ಪ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ