ಶುಕ್ರವಾರ, ಆಗಸ್ಟ್ 15, 2025

ನಗರದ ವಿವಿಧೆಡೆ ವಿಜೃಂಭಣೆಯಿಂದ ಜರುಗಿದ ೭೯ನೇ ಸ್ವಾತಂತ್ರ್ಯೋತ್ಸವ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ:  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್), ತರಂಗ ಕಿವುಡು ಮಕ್ಕಳ ಶಾಲೆ, ಗೃಹರಕ್ಷಕ ದಳ  ಸೇರಿದಂತೆ ನಗರದ ವಿವಿಧೆಡೆ ಶುಕ್ರವಾರ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಜರುಗಿತು.  
    ಸೈಲ್-ವಿಐಎಸ್‌ಎಲ್ ಕಾರ್ಖಾನೆ : 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. 
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  ಇದಕ್ಕೂ ಮೊದಲು ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಕಾರ್ಯಪಾಲಕ ನಿರ್ದೇಶಕರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡರು. 
    ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು, ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಹಾಗು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆ ಬ್ಯಾಂಡ್ ಸೆಟ್ ಮತ್ತು ವಿವಿಧ ಶಾಲೆಗಳ ಸ್ಕೌಟ್ಸ್-ಗೈಡ್ಸ್ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಧ್ವಜಾರೋಹಣ ನೆರವೇರಿಸಿದ ಬಿ.ಎಲ್ ಚಂದ್ವಾನಿ ಪಥಸಂಚಲನ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ಕೆ. ಜತಿನ್, ಸಾನಿಕಾ ದೇವಾಂಗ ಮಠ್ ಮತ್ತು ಪ್ರತೀಕ್ ಬಡಿಗೇರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ೨೦೨೪ ದಸರಾ ಸಿ.ಎಂ. ಕಪ್ ಬಾಲ್‌ಬ್ಯಾಂಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿರುವ ಕಾರ್ಖಾನೆ ಉದ್ಯೋಗಿ ಸೀತಾರಾಮ್, ಸಕ್ಷಮ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ಉಪ ಮಹಾಪ್ರಬಂಧಕ(ಚಾಲನೆ) ಎಮ್.ಎಸ್ ಕುಮಾರ್ ಮತ್ತು ಉಪಪ್ರಬಂಧಕ(ಮಿಲ್ಸ್ ಮತ್ತು ಆರ್.ಟಿ.ಎಸ್) ಎಮ್. ಕೃಷ್ಣ  ಹಾಗೂ ಸಮರ್ಥ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ನಾಗೇಶ್ ಹಾಗೂ ಪ್ರವೇಶ್ ಝಾ, ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್ ಸೇರಿದಂತೆ ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಉಪ ಪ್ರಬಂಧಕಿ(ಎಚ್.ಆರ್)  ಕೆ.ಎಸ್ ಶೋಭ ಮತ್ತು  ಕಿರಿಯ ಪ್ರಬಂಧಕ (ಹೆಚ್.ಆರ್-ಎಲ್&ಡಿ) ಎಮ್.ಎಲ್. ಯೋಗೇಶ್ ಕಾರ್ಯಕ್ರಮ ನಿರೂಪಿಸಿದರು. 
 

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಂಘದ ಕಛೇರಿಯನ್ನು ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಉದ್ಘಾಟಿಸಿ ಮಾತನಾಡಿದರು. 
    ಬಿಪಿಎಲ್ ಸಂಘ: 
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರ .  ಸಂಘದ ಗೌರವ ಅಧ್ಯಕ್ಷ ಎಸ್.ಕೆ ಸುಧೀಂದ್ರ ಉದ್ಘಾಟಿಸಿದರು. 
ಇದಕ್ಕೂ ಮೊದಲು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಸಂಘದ ಕಛೇರಿ ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರ ಎಂ.ಜಿ ರಾಮಚಂದ್ರನ್, ನಗರಸಭೆ ಸದಸ್ಯ ಐ.ವಿ ಸಂತೋಷ್ ಕುಮಾರ್, ಸಂಜೀವಿನಿ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕಾರ್ಯಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ದಾಸ್, ಸಂಘಟನಾ ಕಾರ್ಯದರ್ಶಿಗಳಾದ ಜ್ಯೋತಿ ಪ್ರಸಾದ್, ರಾಜಣ್ಣ, ಖಜಾಂಚಿ ಸುನಿಲ್ ಕುಮಾರ್, ನಿರ್ದೇಶಕರಾದ ನಿರಂಜನ್, ಯೋಗೇಶ್, ರಘು ಮತ್ತು ಸಂತೋಷ್ ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.  ಸಿಹಿ ವಿತರಣೆ ಹಾಗು ಊಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು. 


ಭದ್ರಾವತಿ ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. 
    ತರಂಗ ಕಿವುಡು ಮಕ್ಕಳ ಶಾಲೆ: 
    ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  
    ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. ಟ್ರಸ್ಟ್ ಅಧ್ಯಕ್ಷ ಡಾ. ಟಿ. ನರೇಂದ್ರಭಟ್ ಅಧ್ಯಕ್ಷತೆ ವಹಿಸಿದ್ದರು. ಡಾ. ಸಿ.ಆರ್ ಗುರುರಾಜು, ಬಿ. ಮಂಜುನಾಥ್, ಮಹಮದ್ ಆರೀಫ್, ಕೆ. ಅನಂತ ಕೃಷ್ಣನಾಯಕ್, ಆರ್. ಉಮೇಶ್, ಯಲ್ಲೋಜಿ ರಾವ್, ಮಧು, ಟ್ರಸ್ಟ್ ಕಾರ್ಯದರ್ಶಿ ಸುಭಾಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾವತಿ ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಗೃಹರಕ್ಷಕ ದಳ : 
    ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. 
    ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸ್ಥಳೀಯ ಮುಖಂಡ ಎಸ್.ಎಸ್ ಭೈರಪ್ಪ, ನಿವೃತ್ತ ಪ್ಲಟೂನ್ ಕಮಾಂಡರ್‌ಗಳಾದ ಕೃಷ್ಣೋಜಿರಾವ್, ಎ. ರಾಜಣ್ಣ, ಘಟಕಾಧಿಕಾರಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು, ಗೃಹರಕ್ಷಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ಬಿ.ಎಸ್ ಗಣೇಶ್ ಹಾಗು ಎಸ್.ಎಸ್ ಭೈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ