ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಗಣೇಶ್ ಕಾಲೋನಿ ಜಿ.ಸಿ ಬಾಯ್ಸ್ ಯುವಕರ ಸಂಘದ ವತಿಯಿಂದ ೫೫ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಶನಿವಾರ ಬೆಳಿಗ್ಗೆ ಸತ್ಯನಾರಾಯಣ ಪೂಜೆ, ಹೋಮ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.
ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಗಣೇಶ್ ಕಾಲೋನಿ ಜಿ.ಸಿ ಬಾಯ್ಸ್ ಯುವಕರ ಸಂಘದ ವತಿಯಿಂದ ೫೫ನೇ ವರ್ಷದ ವಿನಾಯಕ ಮಹೋತ್ಸವ ಆಚರಿಸಲಾಗುತ್ತಿದ್ದು, ಶನಿವಾರ ಬೆಳಿಗ್ಗೆ ಸತ್ಯನಾರಾಯಣ ಪೂಜೆ, ಹೋಮ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.
ನ್ಯಾಯಬೆಲೆ ಅಂಗಡಿ ವಿತರಕರಾದ ಸಚ್ಚಿದಾನಂದ-ಎ.ಎಸ್ ಪದ್ಮಾವತಿ ದಂಪತಿ ಸತ್ಯನಾರಾಯಣ ಪೂಜೆ, ಹೋಮ ಧಾರ್ಮಿಕ ಆಚರಣೆ ನೆರವೇರಿಸಿದರು. ಗಣೇಶ್ ಕಾಲೋನಿ, ವಿದ್ಯಾಮಂದಿರ, ಹಾಲಪ್ಪ ಶೆಡ್, ಕಿತ್ತೂರುರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್), ಎನ್‌ಟಿಬಿ ಬಡಾವಣೆ ಸೇರಿದಂತೆ ಜನ್ನಾಪುರ ಸುತ್ತಮುತ್ತಲಿನ ನಿವಾಸಿಗಳು ಪಾಲ್ಗೊಂಡಿದ್ದರು. ಸ್ಥಳೀಯ ಯುವಕರು ಒಗ್ಗಟ್ಟಾಗಿ ನಿರಂತರವಾಗಿ ವಿನಾಯಕ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ೩೧ರ ಭಾನುವಾರ ವಿವಿಧ ಕಲಾತಂಡಗಳೊಂದಿಗೆ ಉತ್ಸವ ಮೆರವಣಿಗೆ ಮೂಲಕ ವಿನಾಯಕ ಮೂರ್ತಿ ವಿಸರ್ಜನೆ ನಡೆಯಲಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ