ಆರ್. ಸಂದೀಪ್
ಭದ್ರಾವತಿ: `ಪಂಚಮಸಾಲಿ ಸಮುದಾಯ : ಒಂದು ಸಮಾಜಶಾಸ್ತ್ರ ಅಧ್ಯಯನ' ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಆರ್. ಸಂದೀಪ್‌ರವರಿಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ ಲಭಿಸಿದೆ.
ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಎಂ. ಪೂರ್ವಾಚಾರ್‌ರವರ ಮಾರ್ಗದರ್ಶನದಲ್ಲಿ ಸಂಶೋಧನಾ ವರದಿ ಮಂಡಿಸಿದ್ದರು. ಸಂದೀಪ್ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಪ್ರಗತಿಪರ ರೈತ ಕೆ.ಜಿ ರೇವಣಸಿದ್ದಪ್ಪ-ನಾಗರತ್ನಮ್ಮ ದಂಪತಿ ಪುತ್ರರಾಗಿದ್ದಾರೆ. ಇವರ ಸಾಧನೆಯನ್ನು ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ