ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಒಂದು ವರ್ಷ ಎಂಟು ತಿಂಗಳು ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಶಿರಸಿ ನಗರಸಭೆಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ. ಚನ್ನಪ್ಪನವರ್ ಹಾಗು ನೂತನ ಪೌರಾಯುಕ್ತರಾಗಿ ಆಗಮಿಸಿರುವ ಕೆ.ಎನ್ ಹೇಮಂತ್‌ರವರನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ನಗರಸಭೆ ಪೌರಾಯುಕ್ತರಾಗಿ ಒಂದು ವರ್ಷ ಎಂಟು ತಿಂಗಳು ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಶಿರಸಿ ನಗರಸಭೆಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ. ಚನ್ನಪ್ಪನವರ್ ಹಾಗು ನೂತನ ಪೌರಾಯುಕ್ತರಾಗಿ ಆಗಮಿಸಿರುವ ಕೆ.ಎನ್ ಹೇಮಂತ್‌ರವರನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಪ್ರಕಾಶ್ ಎಂ. ಚನ್ನಪ್ಪನವರ್ ಕರ್ತವ್ಯ ಕುರಿತು ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸದಸ್ಯರಾದ ವಿ. ಕದಿರೇಶ್, ಬಿ.ಕೆ ಮೋಹನ್, ಚನ್ನಪ್ಪ, ಟಿಪ್ಪುಸುಲ್ತಾನ್, ಬಿ.ಟಿ ನಾಗರಾಜ್, ಅನುಸುಧಾ ಮೋಹನ್‌ಪಳನಿ, ಬಸವರಾಜ್ ಬಿ. ಆನೇಕೊಪ್ಪ, ಆರ್ ಮೋಹನ್ ಕುಮಾರ್, ಶೃತಿ ವಸಂತ್‌ಕುಮಾರ್, ಪಲ್ಲವಿ ಸೇರಿದಂತೆ ಇನ್ನಿತರ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರಾದ ಸತ್ಯ ಭದ್ರಾವತಿ, ಚಿನ್ನಯ್ಯ, ಬಿ.ಎನ್ ರಾಜು, ತೀರ್ಥೇಶ್, ನಗರಸಭೆ ಸಮುದಾಯ ಸಂಘಟನಾಧಿಕಾರಿ ಎಂ. ಸುಹಾಸಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಎಂ. ಚನ್ನಪ್ಪನವರ್, ವೃತ್ತಿ ಬದುಕಿನಲ್ಲಿ ಹಲವಾರು ರೀತಿಯ ಅನುಭವಗಳನ್ನು ಕಂಡಿದ್ದೇನೆ. ವಿಶೇಷವಾಗಿ ಭದ್ರಾವತಿ ನಗರಸಭೆಯಲ್ಲಿ ಲಭಿಸಿದ ಉತ್ತಮ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ. ನಗರಸಭೆ ಸಹದ್ಯೋಗಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು, ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್ ಹೇಮಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ, ತಾಲೂಕು ಅಧ್ಯಕ್ಷ ವತಿಯಿಂದ ಎಸ್. ಚೇತನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಿ. ರವಿಪ್ರಸಾದ್, ಉಪಾಧ್ಯಕ್ಷ ಎಸ್. ಪವನ್ ಕುಮಾರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್, ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ