ಇತ್ತೀಚಿಗೆ ಕೇರಳದ ಕೊಯಿಕೋಡ್(ಕ್ಯಾಲಿಕಟ್)ನಲ್ಲಿ ಜರುಗಿದ ರಾಷ್ಟ್ರೀಯ ಮಾಸ್ಟರ್‍ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭದ್ರಾವತಿ ನಗರದ ವಿಐಎಸ್‌ಎಲ್ ವ್ಯಾಯಾಮ ಶಾಲೆಯ ನಂಜುಂಡೇಗೌಡರವರು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ: ಇತ್ತೀಚಿಗೆ ಕೇರಳದ ಕೊಯಿಕೋಡ್(ಕ್ಯಾಲಿಕಟ್)ನಲ್ಲಿ ಜರುಗಿದ ರಾಷ್ಟ್ರೀಯ ಮಾಸ್ಟರ್‍ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಗರದ ವಿಐಎಸ್‌ಎಲ್ ವ್ಯಾಯಾಮ ಶಾಲೆಯ ನಂಜುಂಡೇಗೌಡರವರು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿರುವ ನಂಜುಂಡೇಗೌಡರವರು ೬೦ ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ನಂಜುಂಡೇಗೌಡರವರು ಈಗಾಗಲೇ ರಾಷ್ಟ್ರ ಮತ್ತು ರಾಜ್ಯಮಟ್ಟದ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ನಗರದ ಕ್ರೀಡಾಪಟುಗಳು, ಅಭಿಮಾನಿಗಳು ಹಾಗು ಗಣ್ಯರು ಇವರನ್ನು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ