ರಕ್ತದ ಅಗತ್ಯತೆ ಹಾಗು ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ಪೊಲೀಸ್ ಭದ್ರಾವತಿ ನಗರದ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಹಾಗು ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಶುಕ್ರವಾರ ೫೪ನೇ ರಕ್ತದಾನ ಶಿಬಿರ ಆಯೋಜಿಸುವಲ್ಲಿ ಯಶಸ್ವಿಯಾಗಿದೆ.
ಭದ್ರಾವತಿ : ರಕ್ತದ ಅಗತ್ಯತೆ ಹಾಗು ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ಪೊಲೀಸ್ ನಗರದ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಹಾಗು ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಶುಕ್ರವಾರ ೫೪ನೇ ರಕ್ತದಾನ ಶಿಬಿರ ಆಯೋಜಿಸುವಲ್ಲಿ ಯಶಸ್ವಿಯಾಗಿದೆ.
ಮೈಸೂರು ಕಾಗದ ಕಾರ್ಖಾನೆಯ ೯೭ ಬೆಟಾಲಿಯನ್ ಕ್ಷಿಪ್ರ ಕಾರ್ಯ ಪಡೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಬೆಟಾಲಿಯನ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸೇರಿದಂತೆ ಒಟ್ಟು ೩೮ ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
೯೭ ಬೆಟಾಲಿಯನ್ ಕಮಾಂಡೆಂಟ್ ಕಮಲೇಶ್ ಕುಮಾರ್, ಕಮಾಂಡೆಂಟ್-೨ ಸಚಿನ್ ಗಾಯಕ್‌ವಾಡ್ ಸಂತೋ, ಉಪ ಕಮಾಂಡೆಂಟ್ ರಮೇಶ್ ಸಿಂಗ್, ಸಹಾಯಕ ಕಮಾಂಡೆಂಟ್ ಅನಿಲ್‌ಕುಮಾರ್, ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಸ್ಥಾಪಕ ಹರೀಶ್, ವೈದ್ಯಾಧಿಕಾರಿ ಆತ್ಯಾರ, ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಸ್ಟೇಬಲ್, ಹಸಿರು ಸೇನಾನಿ ಹಾಲೇಶಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ