ಶುಕ್ರವಾರ, ಆಗಸ್ಟ್ 15, 2025

ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣವಾಗಲಿ : ಪರುಸಪ್ಪ ಕುರುಬರ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 
    ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಸಾರ್ಥಕಗೊಳ್ಳಬೇಕಾದರೆ ನಾವೆಲ್ಲರೂ ಕೇವಲ ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡುವಂತವರಾಗಬೇಕು. ಪರಿಸರ ಕಾಳಜಿಯೊಂದಿಗೆ ಉತ್ತಮ ಆರೋಗ್ಯವಂತ ಸಮಾಜ ಸಹ ನಿರ್ಮಾಣಗೊಳ್ಳಬೇಕು. ಮುಂದಿನ ಪೀಳಿಗೆಗೆ ನಮ್ಮ ಕೊಡುಗೆ ಈ ನಿಟ್ಟಿನಲ್ಲಿರಬೇಕೆಂದರು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಕೇಂದ್ರ ಹಾಗು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ತನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡಿದೆ. ಆದರೆ ಬಿಜೆಪಿ ಪಕ್ಷ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೂ ಸಹ ಜನಪರ ಯೋಜನೆಗಳನ್ನು ಜಾರಿಗೊಳಿಸದೆ ಕೇವಲ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸುತ್ತಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಎಂಪಿಎಂ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಅರಣ್ಯ ಇಲಾಖೆ ಕಾರ್ಖಾನೆ ಆರಂಭಕ್ಕೆ ತೊಡಾಕಿದೆ. ಕ್ಷೇತ್ರದ ಹಿತದೃಷ್ಟಿಯಿಂದ ಅನುಮತಿ ನೀಡುವಂತೆ ಕೋರಿದರು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್ ಸೇರಿದಂತೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್, ಕೋಕಿಲ, ತ್ರಿವೇಣಿ ತಂಡದವರಿಂದ ನಾಡಗೀತೆ ನಡೆಯಿತು. ಪೊಲೀಸ್, ಗೃಹ ರಕ್ಷಕದಳ, ವಿವಿಧ ಶಾಲಾ ಕಾಲೇಜುಗಳ ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ