ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಹಕಾರದೊಂದಿಗೆ ಸಂಘದ ೫ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕರ್ನಾಟಕ ಸ್ಟಾರ್ ಸಿಂಗರ್-೨೦೨೫, ಸೀಸನ್-೨ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆಯ ಅಂತಿಮ ಸ್ಪರ್ಧೆ ಆ.೨೪ರ ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಸಂಜೆ ೪ ಗಂಟೆಗೆ ನಡೆಯಲಿದೆ.
ರಾಜ್ಯದ ವಿವಿಧೆಡೆಗಳಿಂದ ಗಾಯಕ, ಗಾಯಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಟಿ.ವಿ ಶೋ ಗಳಲ್ಲಿ ನುಡಿಸಿದ ಖ್ಯಾತಿಯುಳ್ಳ ಸಂಗೀತ ವಾದ್ಯಗಾರರು, ನಿರೂಪಕರು, ತೀರ್ಪುಗಾರರು ಭಾಗವಹಿಸಲಿದ್ದಾರೆ. ಇದೆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಲಾವಿದರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ, ಹಿರಿಯ ಕಲಾವಿದರಿಗೆ ದಿವಂಗತ ಜಯಶೀಲನ್ ರಾಜ್ಯ ಪ್ರಶಸ್ತಿ ಮತ್ತು ದಿವಂಗತ ಗೀತಾಂಜಲಿ ಶ್ರೀನಿವಾಸ್ ರಾಜ್ಯಪ್ರಶಸ್ತಿ ಪ್ರದಾನ ಮತ್ತು ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಈಗಾಗಲೇ ಆ.೧೬ರಂದು ಸೆಲೆಕ್ಷನ್ ಅಡಿಷನ್ ಮತ್ತು ಆ.೧೭ರಂದು ಸೆಮಿಫೈನಲ್ ಅಡಿಷನ್ ನಗರದ ನ್ಯೂಟೌನ್ ಜೆಟಿಎಸ್ ಶಾಲೆ ಪಕ್ಕದ ಲಯನ್ಸ್ ಕ್ಲಬ್, ಶುಗರ್ ಟೌನ್‌ನಲ್ಲಿ ನಡೆದಿದ್ದು, ಅಂತಿಮ ಸ್ಪರ್ಧೆ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲ ಬಹುಮಾನ ರು. ೨೫ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ, ದ್ವಿತೀಯ ಬಹುಮಾನ ರು. ೧೫ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ, ತೃತೀಯ ಬಹುಮಾನ ರು. ೧೦ ಸಾವಿರ ನಗದು, ಅಭಿನಂದನಾ ಪತ್ರ ಮತ್ತು ಟ್ರೋಫಿ ಹಾಗು ಸಮಾಧಾನಕರ ಬಹುಮಾನ ರು. ೨ ಸಾವಿರ ನಗದು ಮತ್ತು ಭಿನಂದನ ಪತ್ರ ನೀಡಲಾಗುವುದು. ಅಂತಿಮ ಸ್ಪರ್ಧೆ ಕಾರ್ಯಕ್ರಮದಲ್ಲಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ