ಭದ್ರಾವತಿ: ಪೊಲೀಸ್ ಠಾಣೆಗೆ ದೂರು ನೀಡಿದ ಲಂಬಾಣಿ (ಪರಿಶಿಷ್ಟ ಜಾತಿ) ಜನಾಂಗಕ್ಕೆ ಸೇರಿದ ಮಹಿಳೆಯೊಬ್ಬರ ಮೇಲೆ ಜಾತಿ ನಿಂದನೆ, ಹಲ್ಲೆ ಮಾಡಿ ಮಾನಹಾನಿಗೆ ಯತ್ನಿಸಿದ್ದ ನಾಲ್ವರು ಆರೋಪಿಗಳಿಗೆ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ರವರು ಶನಿವಾರ ೪ ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿ ಆದೇಶಿಸಿದ್ದಾರೆ.
ತಾಲೂಕಿನ ಸಿರಿಯೂರು ವೀರಾಪುರ ಗ್ರಾಮದ ಮನು (ಮೃತಪಟ್ಟಿದ್ದಾರೆ), ಶ್ರೀಧರ, ಮೋಹನ್ ಮತ್ತು ಹರೀಶ್ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ. ೧೦ ಆಗಸ್ಟ್, ೨೦೧೮ರಂದು ಇದೆ ಗ್ರಾಮದ ಲಂಬಾಣಿ ಜನಾಂಗದ ಮಹಿಳೆಯೊಬ್ಬರ ಮನೆಗೆ ಈ ನಾಲ್ವರು ಆರೋಪಿಗಳು ನುಗ್ಗಿ ದಾಂಧಲೆ ನಡೆಸುವ ಜೊತೆಗೆ ಆಶ್ಲೀಲ ಪದಗಳಿಂದ ಜಾತಿ ನಿಂದನೆ ಮಾಡಿ ಮನೆಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಮಾನಹಾನಿಗೆ ಯತ್ನಿಸಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಂದಿನ ಪೊಲೀಸ್ ಉಪಾಧೀಕ್ಷಕರಾಗಿದ್ದ ಓಂಕಾರ ನಾಯ್ಕರವರು ತನಿಖಾಧಿಕಾರಿಯಾಗಿ ಹಾಗು ಸಹಾಯಕ ಠಾಣಾ ಉಪ ನಿರೀಕ್ಷಕರಾಗಿದ್ದ ಕೆ.ಎಚ್ ಜಯಪ್ಪ ಸಹಾಯಕ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾದ ರತ್ನಮ್ಮ ವಾದ ಮಂಡಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ