ಆರ್‌ಎಎಫ್ ಅಧಿಕಾರಿಗಳು, ಸಿಬ್ಬಂದಿಗಳಿಂದ ಅರಿವು
ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್, ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್)-೯೭ ಬೆಟಾಲಿಯನ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹರ್ ಘರ್ ತಿರಂಗ ಬೈಕ್‌ರ್‍ಯಾಲಿ ನಡೆಸಿ ಶಾಲಾ ಮಕ್ಕಳಿಗೆ ಅರಿವು ಮೂಡಿಸಿದರು.
ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್, ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್)-೯೭ ಬೆಟಾಲಿಯನ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹರ್ ಘರ್ ತಿರಂಗ ಬೈಕ್‌ರ್‍ಯಾಲಿ ನಡೆಸಿ ಶಾಲಾ ಮಕ್ಕಳಿಗೆ ಅರಿವು ಮೂಡಿಸಿದರು.
ನಾಗರಿಕರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ದೇಶದ ಸ್ವಾತಂತ್ರ್ಯದ ಮಹತ್ವ ತಿಳಿಸಲು ಮತ್ತು ತ್ರಿವರ್ಣ ಧ್ವಜದ ಅರಿವು ಮೂಡಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ಹೆಚ್ಚಿಸಲು ಬೆಟಾಲಿಯನ್ ಕಮಾಂಡರ್ ಕಮಲೇಶ್ ನೇತೃತ್ವದಲ್ಲಿ ರ್‍ಯಾಲಿ ನಡೆಸಲಾಯಿತು. .
ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಪ್ರಮುಖ ರಸ್ತೆಗಳಲ್ಲಿ ರ್‍ಯಾಲಿ ನಡೆಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಹಾಗು ಶಿಕ್ಷಕರೊಂದಿಗೆ ಸಂವಾದ ಮತ್ತು ದೇಶ ಭಕ್ತಿ ವಿಚಾರದ ಅರಿವು ಮೂಡಿಸಿ ಪ್ರತಿ ಮನೆಯ ಮೇಲೂ ದೇಶ ಭಕ್ತಿಗಾಗಿ ತಿರಂಗ ಬಾವುಟ ಹಾರಿಸಲು ಕರೆ ನೀಡಲಾಯಿತು.
ಆರ್‌ಎಎಫ್ ಕಮಾಂಡರ್-೨ ಸಂತೋ ಹಾಗು ಸಿಬ್ಬಂದಿ ವರ್ಗದವರು ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಶಾಲಾ ಮಕ್ಕಳು ಮತ್ತು ಶಿಕ್ಷಕರು ಆರ್‌ಎಎಫ್ ಅಧಿಕಾರಿಗಳು ಹಾಗು ಸಿಬ್ಬಂದಿಗಳೊಂದಿಗೆ ತ್ರಿವರ್ಣ ಧ್ವಜ ಹಿಡಿದು ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಸಂತಸ ವ್ಯಕ್ತ ಪಡಿಸಿದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಮತ್ತು ಶಿಕ್ಷಕರು ಆರ್‌ಎಎಫ್ ಅಧಿಕಾರಿಗಳು ಹಾಗು ಸಿಬ್ಬಂದಿಗಳೊಂದಿಗೆ ತ್ರಿವರ್ಣ ಧ್ವಜ ಹಿಡಿದು ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಸಂತಸ ವ್ಯಕ್ತ ಪಡಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ