ಭದ್ರಾವತಿ ಗೌರಿ-ಗಣೇಶ ಹಾಗು ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರಸಭೆ ಪೌರಾಯುಕ್ತರು ಹಾಗು ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಭದ್ರಾವತಿ: ಗೌರಿ-ಗಣೇಶ ಹಾಗು ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರಸಭೆ ಪೌರಾಯುಕ್ತರು ಹಾಗು ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಬ್ಯಾನರ್ ಮತ್ತು ಫ್ಲೆಕ್ಸ್‌ಗಳಿಗೆ ಅನುಮತಿ ನೀಡುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳು, ಬ್ಯಾರಿಗೇಡ್‌ಗಳ ಅಳವಡಿಕೆ ಹಾಗು ಸುಗಮ ಸಂಚಾರ ವ್ಯವಸ್ಥೆ, ಸೂಕ್ಷ್ಮ ಹಾಗು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳು ಮತ್ತು ವಾಚ್ ಟವರ್‌ಗಳ ಅಳವಡಿಕೆ. ಹಬ್ಬಗಳ ಆಚರಣೆ ಮುಕ್ತಾಯಗೊಂಡ ತಕ್ಷಣ ತುರ್ತಾಗಿ ಬ್ಯಾನರ್ ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸುವ ಕುರಿತು ಸಂಚಾರ ದಟ್ಟಣೆ ತಪ್ಪಿಸಲು ಸಿಗ್ನಲ್‌ಲೈಟ್‌ಗಳ ಅಳವಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಪೊಲೀಸ್ ನಗರ ವೃತ್ತ ನಿರೀಕ್ಷ ಶ್ರೀಶೈಲ ಕುಮಾರ್, ನಗರಸಭೆ ಹಿರಿಯ ಸದಸ್ಯ, ಹೊಸಮನೆ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಟಿಪ್ಪು ಸುಲ್ತಾನ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ