ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಸಂಗೊಳ್ಳಿ ರಾಯಣ್ಣ ಖಾಸಗಿ ಬಸ್ ನಿಲ್ದಾಣದಿಂದ ರಂಗಪ್ಪ ವೃತ್ತ ಸಂಪರ್ಕಿಸುವ ಹೊಸಸೇತುವೆ ಮಾರ್ಗದ ರಸ್ತೆ ಇದೀಗ ಶ್ರೀ ಕೃಷ್ಣ ದೇವರಾಯ ರಸ್ತೆಯಾಗಿ ನಾಮಕರಣಗೊಂಡು ಭಾನುವಾರ ಉದ್ಘಾಟನೆಗೊಂಡಿತು.
ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಹಾಗು ಸಂಗೊಳ್ಳಿ ರಾಯಣ್ಣ ಖಾಸಗಿ ಬಸ್ ನಿಲ್ದಾಣದಿಂದ ರಂಗಪ್ಪ ವೃತ್ತ ಸಂಪರ್ಕಿಸುವ ಹೊಸಸೇತುವೆ ಮಾರ್ಗದ ರಸ್ತೆ ಇದೀಗ ಶ್ರೀ ಕೃಷ್ಣ ದೇವರಾಯ ರಸ್ತೆಯಾಗಿ ನಾಮಕರಣಗೊಂಡು ಭಾನುವಾರ ಉದ್ಘಾಟನೆಗೊಂಡಿತು.
ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಂ.ಆರ್ ಸೀತಾರಾಮು ಹಾಗು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಅಳವಡಿಸಲಾಗಿರುವ ನಾಮಫಲಕ ಅನಾವರಣಗೊಳಿಸುವ ಮೂಲಕ ಶ್ರೀ ಕೃಷ್ಣ ದೇವರಾಯ ರಸ್ತೆ ಉದ್ಘಾಟಿಸಿದರು.
ಬಲಿಜ ಸಮುದಾಯದವರ ಕೋರಿಕೆ ಮೇರೆಗೆ ಈ ಹಿಂದೆ ಶ್ರೀ ಕೃಷ್ಣ ದೇವರಾಯ ರಸ್ತೆ ಹೆಸರು ನಾಮಕರಣಗೊಳಿಸುವ ಸಂಬಂಧ ನಗರಸಭೆಯಲ್ಲಿ ಸಲ್ಲಿಕೆಯಾಗಿದ್ದ ಪ್ರಸ್ತಾವನೆಗೆ ನಗರಸಭೆ ಎಲ್ಲಾ ಸದಸ್ಯರು ಪಕ್ಷ ಬೇಧ ಮರೆತು ಒಮ್ಮತ ಸೂಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಸರ್ಕಾರದಿಂದ ಅನುಮೋದನೆಗೊಂಡಿದೆ.
ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಸದಸ್ಯರಾದ ಬಿ.ಟಿ ನಾಗರಾಜ್, ಬಸವರಾಜ ಬಿ. ಆನೇಕೊಪ್ಪ, ಅನುಸುಧ ಮೋಹನ್ ಪಳನಿ, ಕೆ. ಸುದೀಪ್ ಕುಮಾರ್, ಬಲಿಜ ಸಮಾಜದ ತಾಲೂಕು ಅಧ್ಯಕ್ಷ ಎಚ್.ಆರ್ ರಂಗನಾಥ್, ಉಪಾಧ್ಯಕ್ಷರಾದ ಪದ್ಮ ಹನುಮಂತಪ್ಪ, ಎಸ್.ಬಿ ಜಂಗಮಪ್ಪ, ಪ್ರಧಾನ ಕಾರ್ಯದರ್ಶಿ ಪಿ. ಸತೀಶ್, ಸಹ ಕಾರ್ಯದರ್ಶಿ ಟಿ. ರಮೇಶ್, ಮುಖಂಡರಾದ ಬಿ. ಗಂಗಾಧರ್, ಟಿ.ಡಿ ಶಶಿಕುಮಾರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ