ಆ.೧೫ರಂದು ಬೆಂಗಳೂರಿನಲ್ಲಿ ೩ ಹಾಡುಗಳ ಬಿಡುಗಡೆ
ಸಂತೋಷ್ ಎನ್ ಶೆಟ್ಟಿ
ಭದ್ರಾವತಿ : ಶಾಮಿಯಾನ ಕೆಲಸದಿಂದ ಇದೀಗ ಸಾಹಿತ್ಯದ ಕಡೆಗೆ ಒಲವು ತೋರಿಸಿರುವ ನಗರದ ಉಜ್ಜನಿಪುರ ಸಂತೋಷ್ ಶಾಮಿಯಾನ ಮಾಲೀಕ ಸಂತೋಷ್ ಎನ್ ಶೆಟ್ಟಿ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಹಿತ್ಯದ ೩ ಹಾಡುಗಳು(ಆಲ್ಬಮ್ ಸಾಂಗ್) ಆ.೧೫ರಂದು ಬಿಡುಗಡೆಗೊಳ್ಳುತ್ತಿದೆ.
ಬೆಂಗಳೂರಿನ ಮಾಗಡಿ ರೋಡ್, ಜಿಟಿ ಮಾಲ್‌ನಲ್ಲಿ ಸಂಜೆ ೬೦೩ಕ್ಕೆ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಪ್ರಪ್ರಥಮ ಬಾರಿಗೆ ಬಿಡುಗಡೆಗೊಳ್ಳುತ್ತಿರುವ ಹಾಡುಗಳಿಗೆ ಎಲ್ಲರ ಮೆಚ್ಚುಗೆ, ಅಭಿಮಾನ, ಪ್ರೋತ್ಸಾಹವಿರಲಿ ಎಂದು ಸಂತೋಷ್ ಎನ್ ಶೆಟ್ಟಿ ಕೋರಿದ್ದಾರೆ.
ವಸಂತ ಮಾಧವ ಭದ್ರಾವತಿಯವರ ಸಂಗೀತ ಮತ್ತು ಗಾಯನದಲ್ಲಿ ಮೊದಲ ಹಾಡು `ತುತ್ತು ನೀಡುವ ಹೆತ್ತ ತಾಯಿಯು', ಬೆಂಗಳೂರಿನ ಎ.ಟಿ ರವೀಶ್ ಸಂಗೀತದಲ್ಲಿ ಎರಡನೇ ಹಾಡು `ಗಣೇಶ ಡಿಜೆ ಹಾಡು' ಮತ್ತು ಮೂರನೇ ಹಾಡು `ಪೋಲ್ಸ್ ಪೆಂಡಾಲ್, ಪೈಪ್ ಪೆಂಡಾಲ್' ಸಂತೋಷ್ ಎನ್. ಶೆಟ್ಟಿ ಸಾಹಿತ್ಯ ಹಾಗು ನಿರ್ಮಾಣದಲ್ಲಿ ಬಿಡುಗಡೆಗೊಳ್ಳುತ್ತಿರುವ ಹಾಡುಗಳಾಗಿವೆ.
ಕಳೆದ ಸುಮಾರು ಒಂದೂವರೆ ವರ್ಷದಲ್ಲಿ ಸಂತೋಷ್ ಎನ್ ಶೆಟ್ಟಿ ಶಾಮಿಯಾನ ಕೆಲಸದೊಂದಿಗೆ ಸಾಹಿತ್ಯದ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದು, ಈಗಾಗಲೇ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕುರಿತು ಭಕ್ತಿ ಗೀತೆಗಳ ಧ್ವನಿಸುರಳಿ ಸಹ ಬಿಡುಗಡೆಗೊಳಿಸಿದ್ದಾರೆ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗಡೆಯವರು ಧ್ವನಿಸುರಳಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೀಗ ಕನ್ನಡ ಚಲನಚಿತ್ರ ರಂಗಕ್ಕೆ ಚಿತ್ರ ಸಾಹಿತಿಯಾಗಿ ಪ್ರವೇಶಿಸುವ ನಿಟ್ಟಿನಲ್ಲಿ ಮೊದಲ ಪ್ರಯತ್ನದಲ್ಲಿದ್ದು, ಈಗಾಗಲೇ ಕನ್ನಡ ಚಲನಚಿತ್ರ ರಂಗದ ಪ್ರಸಿದ್ದ ಸಾಹಿತಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆದುಕೊಂಡಿದ್ದು, ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಕನ್ನಡಿಗರ ಮೆಚ್ಚುಗೆ, ಅಭಿಮಾನ, ಪ್ರೋತ್ಸಾಹ ಹೆಚ್ಚಿದ್ದಾಗಿದೆ.
All the best anna
ಪ್ರತ್ಯುತ್ತರಅಳಿಸಿAll the best
ಪ್ರತ್ಯುತ್ತರಅಳಿಸಿ