ಮಂಜುನಾಥ್
ಭದ್ರಾವತಿ: ನಗರದ ರಂಗಪ್ಪ ವೃತ್ತ, ಜೆಎಂಎಫ್‌ಸಿ ನ್ಯಾಯಾಲಯ ಸಮೀಪದ ಬೆರಳಚ್ಚುಗಾರ(ಟೈಪಿಸ್ಟ್) ಮಂಜುನಾಥ್(೭೩) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಸಹೋದರರು ಇದ್ದಾರೆ. ಹೊಸಮನೆ ಕುವೆಂಪು ನಗರದಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಮಂಜುನಾಥ್‌ರವರು ಹಲವಾರು ವರ್ಷಗಳಿಂದ ಬೆರಳಚ್ಚುಗಾರ ವೃತ್ತಿಯಲ್ಲಿ ತೊಡಗಿಸಿಕೊಂಡು ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ನಗರದ ಬೆರಳಚ್ಚುಗಾರರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ