ಭದ್ರಾವತಿ : ತಾಲೂಕಿನ ಜೀವ ನದಿ, ಸಾವಿರಾರು ರೈತ ಕುಟುಂಬಗಳ ಆಧಾರಸ್ತಂಭ ಭದ್ರಾ ನದಿ ಈ ಬಾರಿ ಸಹ ತುಂಬಿ ಹರಿಯುತ್ತಿದ್ದು, ಭದ್ರಾ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಪ್ರತಿ ವರ್ಷದಂತೆ ಈ ಬಾರಿ ಸಹ ಆ.೨೪ರ ಭಾನುವಾರ ಗಂಗಾಪೂಜೆಯೊಂದಿಗೆ ಬಾಗಿನ ಅರ್ಪಿಸಲಿದ್ದಾರೆ.
ಭದ್ರಾ ಜಲಾಶಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ. ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ