ಭದ್ರಾವತಿ: ತಾಲೂಕು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವತಿಯಿಂದ ಸೆ.೧೪ರ ಭಾನುವಾರ ಬೆಳಗ್ಗೆ ೧೦ ಗಂಟೆಗೆ ನಗರದ ಹೊಸಸೇತುವೆ ರಸ್ತೆಯ ಸಿದ್ಧಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಸದಸ್ಯ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಘದ ಸದಸ್ಯರ ಹಿತ ಕಾಯ್ದುಕೊಳ್ಳುವ ಜೊತೆಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ. ಸಂಘದ ೨೯ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ನಡೆಯಲಿದ್ದು, ಸಂಘದ ಅಧ್ಯಕ್ಷ ರಾಜಾನಾಯ್ಕ ನಲ್ಲಿಸರ ಅಧ್ಯಕ್ಷತೆವಹಿಸಲಿದ್ದಾರೆ. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಆರ್. ನಿಖಿಲ್ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ