ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಶುಕ್ರವಾರ ಭದ್ರಾವತಿ ನಗರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿತ್ತು. ಇದರ ಅಂಗವಾಗಿ ಸೋಮವಾರ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ: ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಶುಕ್ರವಾರ ನಗರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿತ್ತು. ಇದರ ಅಂಗವಾಗಿ ಸೋಮವಾರ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.
ನಗರದ ಹೊಳೆಹೊನ್ನೂರು ವೃತ್ತದಿಂದ ಆರಂಭಗೊಂಡ ಬೃಹತ್ ಮೆರವಣಿಗೆಯಲ್ಲಿ ಆಕರ್ಷಕವಾದ ಮೆಕ್ಕಾ-ಮದೀನಾ ಮಾದರಿಗಳು ಕಂಗೊಳಿಸಿದವು. ಈ ನಡುವೆ ಮುಸ್ಲಿಂ ಸಮುದಾಯದ ಯುವಕರು ಹಸಿರು ಧ್ವಜಗಳನ್ನು ಹಿಡಿದು ಸಂಭ್ರಮಿಸಿದರು. ನಗರದ ವಿವಿಧ ಮಸೀದಿಗಳಿಂದ ಆಗಮಿಸಿದ್ದ ಧರ್ಮ ಗುರುಗಳು ಕುರಾನ್ ಧರ್ಮ ಸಂದೇಶಗಳನ್ನು ವಾಚಿಸುವ ಮೂಲಕ ಹಬ್ಬದ ಮಹತ್ವ ಸಾರಿದರು. ಈ ನಡುವೆ ಮೆರವಣಿಗೆಗೆ ಪೂರ್ವಭಾವಿಯಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಹಸಿರು ದ್ವಾರಗಳ ನಿರ್ಮಾಣ, ಪ್ರಮುಖ ರಸ್ತೆಗಳಲ್ಲಿ ಹಸಿರು ಧ್ವಜಾ, ಹಸಿರು ಬಂಟಿಂಗ್ಸ್‌ಗಳು ರಾರಾರಾಜಿಸುತ್ತಿದ್ದವು.
ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ನಗರದ ವಿವಿಧ ಮಸೀದಿಗಳ ಮುಖಂಡರ ನೇತೃತ್ವದಲ್ಲಿ ಆಯಾ ಭಾಗದ ಮುಸ್ಲಿಂ ಸಮುದಾಯದವರು ಒಂದೆಡೆ ಗುಂಪು ಗುಂಪಾಗಿ ಸೇರಿದ್ದರು. ಇದರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಜನಸಂದಣಿ ಕಂಡು ಬಂದಿತು. ವಾಹನಗಳ ಸುಗಮ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಡಲು ಹರಸಹಾಸ ಪಡುವಂತಾಯಿತು.
ಹೊಳೆಹೊನ್ನೂರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮೂಲಕ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿ ಸಾಗಿ ಸಯ್ಯದ್ ಸಾದತ್ ದರ್ಗಾದಲ್ಲಿ ಅಂತ್ಯಗೊಂಡಿತು. ನಂತರ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೆರವಣಿಗೆಯಲ್ಲಿ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್, ಪದಾಧಿಕಾರಿಗಳಾದ ದಿಲ್ದಾರ್, ಆಬಿದ್ ಆಲಿ, ಫಾರೂಖ್, ಸಿ.ಎಂ ಖಾದರ್, ಮುಖಂಡರಾದ ಸಿ.ಎಂ ಸಾಧಿಕ್, ಮಹಮ್ಮದ್ ಸನಾವುಲ್ಲಾ, ಕರಿಯಪ್ಪ, ತ್ಯಾಗರಾಜ್, ತರುಣ್, ಮೈಲಾರಪ್ಪ, ಜೆಬಿಟಿ ಬಾಬು, ಸಯ್ಯದ್ ರಿಯಾಜ್, ಇಮ್ರಾನ್, ಖಲೀಮುಲ್ಲಾ, ಭಾಷಾ, ಶಬ್ಬೀರ್, ಮುಸ್ತಾಫಾ, ಮುಸ್ತಾಖ್, ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಸದಸ್ಯರಾದ ಬಿ.ಕೆ ಮೋಹನ್, ವಿ. ಕದಿರೇಶ್, ಬಿ.ಟಿ ನಾಗರಾಜ್, ಬಿ.ಎಸ್ ಗಣೇಶ್, ಬಿ.ಎಂ ಮಂಜುನಾಥ್ ಸೇರಿದಂತೆ ವಿವಿಧ ಧರ್ಮಗಳ, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯಗಳ ಪಕ್ಷಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡು ಮೆರವಣಿಗೆಯಲ್ಲಿ ಸೌಹಾರ್ದತೆ ಮೆರೆದರು.
ಉಪವಿಭಾಗಾಧಿಕಾರಿ ಸತ್ಯನಾರಾಯಣ್, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಬೃಹತ್ ಮೆರವಣಿಗೆ ನಡೆಯಿತು. ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಡಿಯೋ ಚಿತ್ರೀಕರಣ ಛಾಯಾಗ್ರಾಹಕರು, ದ್ರೋಣ್ ನಿರ್ವಾಹಕರನ್ನು ಬಂದೋಬಸ್‌ಗೆ ಬಳಸಿಕೊಳ್ಳಲಾಗಿತ್ತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ