ಕೆಪಿಸಿಸಿ ಕಾರ್ಮಿಕ ಘಟಕದ ಭದ್ರಾವತಿ ನಗರ ಬ್ಲಾಕ್ ಅಧ್ಯಕ್ಷರಾಗಿ ಇಂದಿರಾ ನಗರದ ನಿವಾಸಿ ನದೀಮ್ ಬಾಷಾರವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಭದ್ರಾವತಿ: ಕೆಪಿಸಿಸಿ ಕಾರ್ಮಿಕ ಘಟಕದ ನಗರ ಬ್ಲಾಕ್ ಅಧ್ಯಕ್ಷರಾಗಿ ಇಂದಿರಾ ನಗರದ ನಿವಾಸಿ ನದೀಮ್ ಬಾಷಾರವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ. ಪುಟ್ಟಸ್ವಾಮಿಗೌಡ ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನಕುಮಾರ್‌ರವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಆರ್. ರಾಮ್‌ಕುಮಾರ್ ನೇಮಕಗೊಳಿಸಿ ಆದೇಶಿಸಿದ್ದಾರೆ.
ಪಕ್ಷದ ಸೂಚನೆ ಮತ್ತು ಆದೇಶಗಳ ಅನುಸಾರವಾಗಿ ನೀಡುವ ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸುವ ಜೊತೆಗೆ ಪಕ್ಷದ ನೀತಿನಿರೂಪಣೆಗಳು ಉಲ್ಲಂಘನೆಯಾಗದಂತೆ ಎಚ್ಚರವಹಿಸುವಂತೆ ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ