ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ತನ್ನ ಸಾಮಾಜಿಕ ಹೊಣೆಗಾರಿಕೆಯಡಿ(ಸಿಎಸ್‌ಆರ್) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಸೆ.೧೫ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದೆ.
ಗ್ರಾಮ ಪಂಚಾಯಿತಿ ಸಮೀಪದ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಹೃದಯ, ನೇತ್ರ, ಮೂಳೆ ಮತ್ತು ದಂತ ತಪಾಸಣೆ, ರಕ್ತದೊತ್ತಡ(ಬಿ.ಪಿ), ಸಕ್ಕರೆ(ಮಧುಮೇಹ), ನರರೋಗ ಮತ್ತು ಸ್ತ್ರೀರೋಗ ತಜ್ಞರಿಂದ ತಪಾಸಣೆ ನಡೆಯಲಿದೆ. ಉಚಿತ ಔಷಧ ವಿತರಣೆ ನಡೆಯಲಿದ್ದು, ಅಲ್ಲದೆ ಇದೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಪಪ್ಪಾಯಿ ಮತ್ತು ನುಗ್ಗೆ ಬೀಜಗಳ ಉಚಿತ ವಿತರಣೆ ಸಹ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಸದುಪಯೋಗಪಡೆದುಕೊಳ್ಳುವಂತೆ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್‌ಕುಮಾರ್ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ