ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಧಾರ್ಮಿಕ ಟ್ರಸ್ಟ್ ಗೌರವಾಧ್ಯಕ್ಷರಾದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಭದ್ರಾವತಿ : ಜೇಡಿಕಟ್ಟೆ, ಹೊಸೂರು ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಧಾರ್ಮಿಕ ಟ್ರಸ್ಟ್ ವತಿಯಿಂದ ಸೆ. ೨೨ ರಿಂದ ಅ.೨ರವರೆಗೆ ೯ನೇ ವರ್ಷದ ನಾಡಹಬ್ಬ ಶರನ್ನವರಾತ್ರಿ ದಸರಾ ಮಹೋತ್ಸವ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಗೌರವಾಧ್ಯಕ್ಷರಾದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷ ಸಹ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಗದ್ದಿಗೆ ಮಠದಲ್ಲಿ ನಾಡಹಬ್ಬ ಶರನ್ನವರಾತ್ರಿ ದಸರಾ ಮಹೋತ್ಸವ ಪ್ರಯುಕ್ತ ಪ್ರತಿದಿನ ಸಂಜೆ ೬.೩೦ ರಿಂದ ಭಕ್ತಿ ಗೀತೆಗಳ ಗಾಯನ ಮತ್ತು ಭಜನೆ, ನಂತರ ರಾತ್ರಿ ೮.೩೦ ರಿಂದ ೯ರವರೆಗೆ ವಿಶೇಷ ಅಲಂಕಾರ ಮತ್ತು ಪೂಜೆ ಮಹಾಮಂಗಳಾರತಿ ಹಾಗು ಪ್ರಸಾದ ವಿನಿಯೋಗ ಜರುಗಲಿದೆ.
ಸೆ.೩೦ರ ಮಂಗಳವಾರ ಗ್ರಾಮ ದೇವತೆ ಶ್ರೀ ಕರಿಯಮ್ಮ ದೇವಿ ದೇವಾಲಯದ ಹತ್ತಿರ ದುರ್ಗಾಷ್ಠಿಮಿಯಂದು ದುರ್ಗಾಹೋಮ ನಂತರ ಮಧ್ಯಾಹ್ನ ೧೨.೩೦ಕ್ಕೆ ಪೂರ್ಣಾಹುತಿ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ. ಅ.೨ರ ಗುರುವಾರ ಬೆಳಿಗ್ಗೆ ೬.೩೦ಕ್ಕೆ ಎಲ್ಲಾ ದೇವರುಗಳಿಗೆ ವಿಶೇಷ ಪೂಜೆ ನಂತರ ೧೧ ಗಂಟೆಗೆ ಮಂಗಳವಾದ್ಯ, ವೀರಗಾಸೆ, ಡೊಳ್ಳು ಕುಣಿತದೊಂದಿಗೆ ಪ್ರಮುಖ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದೆ. ಸಂಜೆ ೫ ಗಂಟೆಗೆ ಶ್ರೀ ಚೌಡೇಶ್ವರಿ ದೇವಿಯ ಪೂಜೆಯೊಂದಿಗೆ ಶಕ್ತಿದೇವತೆ ಶ್ರೀ ಕರಿಯಮ್ಮದೇವಿ ದೇವಾಲಯದ ಬನ್ನಿ ಮಂಟಪದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶರನ್ನವರಾತ್ರಿ ದಸರಾ ಮಹೋತ್ಸವ ಯಶಸ್ವಿಗೊಳಿಸುವಂತೆ ಕೋರಿದರು.
ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಧಾರ್ಮಿಕ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಪ್ರಮುಖರಾದ ವಾಗೀಶ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ