ಭದ್ರಾವತಿಯಲ್ಲಿ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಸೋಮವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದ ಶ್ರೀ ರಾಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯರವರ ೧೬೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಹೊಸದಾಗಿ ಮರುನಿರ್ಮಾಣ ಮಾಡುವ ಕಾರ್ಯ ಮುಂದಿನ ಒಂದು ತಿಂಗಳಲ್ಲಿ ಯಶಸ್ಸು ಕಾಣಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಸೋಮವಾರ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದ ಶ್ರೀ ರಾಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯರವರ ೧೬೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರು ನೀಡಿರುವ ಭರವಸೆ ಇನ್ನೊಂದು ತಿಂಗಳಲ್ಲಿ ಯಶಸ್ಸು ಕಾಣುವ ಲಕ್ಷಣಗಳು ಕಂಡು ಬರುತ್ತಿವೆ. ಕೇಂದ್ರ ಸರ್ಕಾರ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ (ವೈಜಾಗ್ ಸ್ಟೀಲ್ ಪ್ಲಾಂಟ್) ಪುನಶ್ಚೇತನಗೊಳಿಸಿದಂತೆ ಈ ಕಾರ್ಖಾನೆಗೂ ಅಗತ್ಯವಿರುವ ಬಂಡವಾಳ ತೊಡಗಿಸಿ ಕಾರ್ಖಾನೆಯ ಬ್ಲಾಸ್ಟ್ ಫರ್‍ನೇಸ್ ಘಟಕ ಉಳಿಸಿಕೊಂಡು ಮರುನಿರ್ಮಾಣ ಮಾಡುವ ಕಾರ್ಯ ಕೈಗೊಳ್ಳಲಿದೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿಯವರ ಶ್ರಮ ಹೆಚ್ಚಿನದ್ದಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಿವೃತ್ತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದರು ನೀಡಿರುವ ಭರವಸೆಯಂತೆ ಕೆಲವು ದಿನಗಳನ್ನು ಕಾದು ನೋಡೋಣ. ಒಂದು ವೇಳೆ ಸಮಸ್ಯೆ ಬಗೆಹರಿಯದಿದ್ದಲ್ಲಿ ನಿಮ್ಮೊಂದಿಗೆ ನಾನು ಸಹ ಹೋರಾಟದಲ್ಲಿ ಪಾಲ್ಗೊಳ್ಳುವೆ ಎಂದರು.
ಕಲ್ಯಾಣ ಕೇಂದ್ರದ ಅಧ್ಯಕ್ಷ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕಾರ್ಮಿಕರಾದ ಎಸ್. ಗಜೇಂದ್ರ ಮತ್ತು ಡಾಕಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಲ್ಯಾಣ ಕೇಂದ್ರದ ಉಪಾಧ್ಯಕ್ಷ ಎಸ್. ಅಡವೀಶಯ್ಯ, ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ್, ಖಜಾಂಚಿ ಎಲ್. ಬಸವರಾಜಪ್ಪ, ಕಾರ್ಯಕಾರಿ ಸಮಿತಿ ಸದಸ್ಯ ಹಾ. ರಾಮಪ್ಪ, ಎಸ್.ಎಸ್ ಭೈರಪ್ಪ, ಕೆಂಪಯ್ಯ, ಜಿ. ಶಂಕರ್, ಬಿ.ಕೆ ರವೀಂದ್ರ ರೆಡ್ಡಿ, ಎಂ. ನಾಗರಾಜ ಮತ್ತು ಲಾಜರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ