ವಾಹನ ಚಾಲಕರು, ಮಾಲೀಕರು, ಅಭಿಮಾನಿಗಳಿಂದ ರಕ್ತದಾನ
ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿಯಿಂದ ಕರ್ನಾಟಕ ರತ್ನ, ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೫ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿಯಿಂದ ಕರ್ನಾಟಕ ರತ್ನ, ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೫ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ನಗರದ ಹಾಲಪ್ಪ ವೃತ್ತ, ಜೀವ ಸಂಜೀವಿನಿ ರಕ್ತ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ ವಾಹನ ಚಾಲಕರು, ಮಾಲೀಕರು ಹಾಗು ವಿಷ್ಣುವರ್ಧನ್ ಅಭಿಮಾನಿಗಳು ರಕ್ತದಾನ ಮಾಡುವ ಮೂಲಕ ಜನ್ಮದಿನ ಕಾರ್ಯಕ್ರಮದಲ್ಲಿ ಗಮನ ಸೆಳೆದರು.
ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಜೀವ ಸಂಜೀವಿನಿ ರಕ್ತ ಕೇಂದ್ರದ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ