ಮಾಜಿ ಮುಖ್ಯಮಂತ್ರಿ, ಸಮಾಜವಾದಿ ದಿವಂಗತ ಜೆ.ಎಚ್. ಪಟೇಲ್‌ರವರ ಹೆಸರಿನಲ್ಲಿ ನೂತನ ವಿಶ್ವವಿದ್ಯಾಲಯ ಆರಂಭಿಸುವಂತೆ ಅಥವಾ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕೆಂದು ಒತ್ತಾಯಿಸಿ ಭದ್ರಾವತಿ ನಗರದ ಜನ್ನಾಪುರ, ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ: ಮಾಜಿ ಮುಖ್ಯಮಂತ್ರಿ, ಸಮಾಜವಾದಿ ದಿವಂಗತ ಜೆ.ಎಚ್. ಪಟೇಲ್‌ರವರ ಹೆಸರಿನಲ್ಲಿ ನೂತನ ವಿಶ್ವವಿದ್ಯಾಲಯ ಆರಂಭಿಸುವಂತೆ ಅಥವಾ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕೆಂದು ಒತ್ತಾಯಿಸಿ ನಗರದ ಜನ್ನಾಪುರ, ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.
ಸಮಾಜವಾದಿ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಹೋರಾಟದ ಹಾದಿಯಲ್ಲಿ ಬೆಳೆದುಬಂದ ಪಟೇಲರು ತಮ್ಮ ಅಧಿಕಾರದ ಅವಧಿಯಲ್ಲಿ ರೈತರು, ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗಕ್ಕೆ, ಎಲ್ಲಾ ಸಮಾಜದ ಪರವಾಗಿ ತೆಗೆದುಕೊಂಡ ಉತ್ತಮ ಕಾರ್ಯಗಳ ಬಗ್ಗೆ, ಲೋಕಸಭೆಯಲ್ಲಿ ಪ್ರಪ್ರಥಮವಾಗಿ ಕನ್ನಡದಲ್ಲಿ ಮಾತನಾಡಿರುವ ಬಗ್ಗೆ, ವಿಧಾನಸಭೆ ಒಳಗೆ ಮತ್ತು ಹೊರಗೆ ಭಾಷಣಗಳ ಕುರಿತು ಹಾಗು ಸಮಗ್ರ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಲುವಾಗಿ ಅವರ ಹೆಸರಿನಲ್ಲಿ ನೂತನ ವಿಶ್ವವಿದ್ಯಾಲಯ ಆರಂಭಿಸುವಂತೆ ಅಥವಾ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕು ಹಾಗೂ ಪಟೇಲರ ಹೆಸರಿನಲ್ಲಿ ಸಾರ್ವಜನಿಕ ನೀತಿ ಮತ್ತು ಆಡಳಿತ ಅಕಾಡೆಮಿ ನಿರ್ಮಿಸಿ ಮುಂದಿನ ರಾಜಕಾರಣಿಗಳಿಗೆ, ಯುವಕರಿಗೆ, ಆಡಳಿತಗಾರರಿಗೆ ಧೀಮಂತ ನಾಯಕನ ಜೀವನ ಚರಿತ್ರೆ ಪರಿಚಯಿಸುವ ಮೂಲಕ ಪಟೇಲರ ಚಿಂತನೆಗಳು ಉಳಿಯಬೇಕೆಂದು ಮನವಿಯಲ್ಲಿ ಕೋರಿದ್ದಾರೆ.
ಮನವಿಯನ್ನು ತಾಲೂಕು ಆಡಳಿತ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪೌರಾಯುಕ್ತ ಎನ್.ಕೆ ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ