ಭದ್ರಾವತಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಭದ್ರಾವತಿ: ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಹುಟ್ಟುಹಬ್ಬ ಹಾಗು ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್‌ರವರ ತಂದೆ-ತಾಯಿಯವರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಮಗ್ರಿಗಳನ್ನು ವಿತರಿಸಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಯಿತು.
ಡಿಎಸ್‌ಎಸ್ ಮುಖಂಡ ಪರಮೇಶ್, ನಗರಸಭೆ ಸೂಪರ್‌ವೈಸರ್ ನರಸಿಂಹ, ಸುಬ್ರಮಣಿ, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ