ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಅಂಗವಾಗಿ ನಗರಸಭೆಯಿಂದ ಹಳೇನಗರದ ಕನಕಮಂಟಪದಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ನಾಡಹಬ್ಬ ದಸರಾ ಅಂಗವಾಗಿ ನಗರಸಭೆಯಿಂದ ಹಳೇನಗರದ ಕನಕಮಂಟಪದಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿರು.
ಟಿ.ವಿ ವಾಹಿನಿಯ ಕಾಮಿಡಿ ಕಿಲಾಡಿಗಳು ಹಾಗು ಬೆಂಗಳೂರಿನ ಗಾಯಕರಿಂದ ನೃತ್ಯ/ಸಂಗೀತ/ ಕಾಮಿಡಿ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ೧೦ ದಿನಗಳ ನಾಡಹಬ್ಬ ದಸರಾ ಆಚರಣೆ ಯಶಸ್ವಿಗೊಳ್ಳಲು ಶ್ರಮಿಸುತ್ತಿರುವ ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನಗರಸಭೆ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನಗರಸಭೆ ಎಲ್ಲಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ