ಎಂ.ಆರ್ ರೇವಣಪ್ಪ
ಭದ್ರಾವತಿ : ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಶಾಖೆ ವತಿಯಿಂದ ಸೆ.೫ರಂದು ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಸಂಜೆ ೪ ಗಂಟೆಗೆ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿದೆ ಎಂದು ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ತಿಳಿಸಿದ್ದಾರೆ.
ಜಾನಪದ ಪರಿಷತ್ ವತಿಯಿಂದ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಮೊದಲ ಬಾರಿಗೆ ಹೋಬಳಿ ಜಾನಪದ ಸಮ್ಮೇಳನ ಸಹ ಯಶಸ್ವಿಯಾಗಿ ನಡೆಸಲಾಗಿದೆ. ಕ್ರಿಯಾಶೀಲತೆ ಕಾಯ್ದುಕೊಂಡಿರುವ ಪರಿಷತ್ ಇದೀಗ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದರು.
ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಘಟನಾ ಕಾರ್ಯದರ್ಶಿ ಬಿ.ಎಚ್ ಪ್ರಶಾಂತ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಚ್. ಸಂಪತ್ ಕುಮಾರ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಂಕರಘಟ್ಟ ದೊಡ್ಡಿಬೀಳು ಕಿನ್ನರಿ ಕಲಾವಿದ ಶಿವಪ್ಪ ಜೋಗಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ, ಜಾನಪದ ಪರಿಷತ್ ಹಿರಿಯೂರು ಹೋಬಳಿ ಘಟಕದ ತಾಲೂಕು ಅಧ್ಯಕ್ಷ ಜಯರಾಂ ಗೊಂದಿ ಮತ್ತು ಶಂಕರಘಟ್ಟ ಹೋಬಳಿ ಘಟಕದ ಅಧ್ಯಕ್ಷೆ ಆರ್. ಕಮಲ ಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಚೌಡಿಕೆ ಕಲಾವಿದ ಲಕ್ಷ್ಮಣ್ ರಾವ್ ಮತ್ತು ಸಂಗಡಿಗರಿಂದ ಚೌಡಿಕೆ ಗೊಂದಲಿಗರ ಪದ ಮತ್ತು ಜಾನಪದ ಕಲಾ ತಂಡಗಳಿಂದ ಜಾನಪದ ಗೀತಾ ಗಾಯನ ನಡೆಯಲಿದೆ ಎಂದರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ