ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ-೯೭ ಬೆಟಾಲಿಯನ್ ವತಿಯಿಂದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರ ಹಾಗು ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ-೯೭ ಬೆಟಾಲಿಯನ್ ವತಿಯಿಂದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರ ಹಾಗು ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಆರ್‌ಎಎಫ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಸೇರಿದಂತೆ ಸುಮಾರು ೪೦ಕ್ಕೂ ಹೆಚ್ಚು ಮಂದಿ ಸಿದ್ದಾರ್ಥ ಅಂಧರ ಕೇಂದ್ರ ಹಾಗು ತರಂಗ ಕಿವುಡು ಮಕ್ಕಳ ಶಾಲಾ ಆವರಣದಲ್ಲಿ ಬೆಳೆದುನಿಂತ ಗಿಡಗಂಟಿಗಳನ್ನು ಕಿತ್ತು ಹಾಕಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯ ತೆಗೆದು ಸ್ವಚ್ಛಗೊಳಿಸಿದರು. ಅಲ್ಲದೆ ತೆಂಗು, ಅಡಕೆ, ಹಣ್ಣು ಹಾಗು ಹೂವಿನ ಗಿಡಗಳಿಗೆ ನೀರೆರೆದರು.
ಆರ್‌ಎಎಫ್ ಕಮಾಂಡೆಂಟ್ ಕಮಲೇಶ್ ಕುಮಾರ್, ಉಪ ಕಮಾಂಡೆಂಟ್ ಸುನಿಲ್ ಕುಮಾರ್ ಹಾಗೂ ನಿರೀಕ್ಷಕ ದೀಪಕ್ ಕುಮಾರ್ ಹಾಗು ಸೇರಿದಂತೆ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಅಂಧ ವಿಕಲಚೇತನರು, ಕಿವುಡು ಮಕ್ಕಳ ಶಾಲೆ ಕಾರ್ಯದರ್ಶಿ ಸುಭಾಷ್ ಮತ್ತು ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ