ಶನಿವಾರ, ಸೆಪ್ಟೆಂಬರ್ 6, 2025

ಸೆ.೭ರಂದು ಚಾತುರ್ಮಾಸ ವ್ರತ ಪೂಜಾನುಷ್ಠಾನದ ಸೀಮೊಲಂಘನ ಕಾರ್ಯಕ್ರಮ



    ಭದ್ರಾವತಿ : ಹಳೇನಗರದ ಶ್ರೀ ಕಾಳಿಕಾಂಬ ಸೇವಾ ಸಮಿತಿ ಹಾಗು ಶ್ರೀ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಸಾವಿತ್ರೀ ಪೀಠಾಧೀಶ್ವರ ಜಗದ್ಗುರು ಅಷ್ಟೋತ್ತರ ಶತಶ್ರೀ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳವರ ೮ನೇ ವರ್ಷದ ಚಾತುರ್ಮಾಸ ವ್ರತ ಪೂಜಾನುಷ್ಠಾನದ ಸೀಮೊಲಂಘನ ಕಾರ್ಯಕ್ರಮ ಸೆ.೭ರ ಭಾನುವಾರ ಹಮ್ಮಿಕೊಳ್ಳಲಾಗಿದೆ. 
    ಬೆಳಿಗ್ಗೆ ೭ ಗಂಟೆಗೆ ವಡ್ಡನಹಾಳ್ ಶ್ರೀ ಮಠದ ಗುರುಕುಟೀರದಿಂದ ಶ್ರೀಗಳು ಹೊರಟು ೮.೩೦ಕ್ಕೆ ಭದ್ರಾನದಿಯಲ್ಲಿ ತೀರ್ಥಸ್ನಾನ ನೆರವೇರಿಸುವರು. ಕಾಳಿಕಾಂಬ ದೇವಸ್ಥಾನಕ್ಕೆ ೯.೩೦ಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುವರು. ನಂತರ ಶ್ರೀಗಳ ಪಾದಪೂಜೆ ನಡೆಯಲಿದೆ. 
    ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕಾಳಿಕಾಂಬ ಸೇವಾ ಸಮಿತಿ ಹಾಗು ಶ್ರೀ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ಶ್ರೀ ಕಾಳಿಕಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಪಿ. ವೆಂಕಟರಮಣ ಶೇಟ್, ವಡ್ಡನಹಾಳ್ ಶ್ರೀ ಮಠದ ಅಧ್ಯಕ್ಷ ಟಿ. ಮಹೇಂದ್ರಚಾರ್, ಶ್ರೀ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಬಿ.ಎಲ್ ನಾಗರಾಜ, ಕಾರ್ಯಾಧ್ಯಕ್ಷ ಸಿ. ರಾಮಾಚಾರಿ, ಶ್ರೀ ಗಾಯಿತ್ರಿ ವಿಶ್ವಕರ್ಮ ಮಹಿಳಾ ಮಂಡಳಿ ಗೌರವಾಧ್ಯಕ್ಷೆ ಭಾಗ್ಯಮ್ಮ ಶಾಂತಾಚಾರ್, ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ