ಎಚ್.ಎಸ್ ಮಾಯಮ್ಮ
ಭದ್ರಾವತಿ: ಜನಸಿರಿ ಫೌಂಡೇಷನ್ ತಾಲೂಕಿನ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಎಚ್.ಎಸ್ ಮಾಯಮ್ಮರವರ ಶಿಕ್ಷಣ ಕ್ಷೇತ್ರದ ಸಾಧನೆ ಗುರುತಿಸಿ ರಾಜ್ಯಮಟ್ಟದ ಜನಸಿರಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಶಿಕ್ಷಕರ ಸದನದ ಸಭಾಂಗಣದಲ್ಲಿ ಜನಸಿರಿ ಫೌಂಡೇಷನ್ ವತಿಯಿಂದ ನಾಗಲೇಖರವರ ಸಾರಥ್ಯದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್‌ರವರ ಅಧ್ಯಕ್ಷತೆಯಲ್ಲಿ ಜರುಗಿದ ಜನಸಿರಿ ಸಾಹಿತ್ಯ ಸಮ್ಮೇಳನದಲ್ಲಿ ಮಾಯಮ್ಮರವರು ಪ್ರಶಸ್ತಿ ಸ್ವೀಕರಿಸಿದರು.
ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್, ಚಲನಚಿತ್ರ ಹಾಸ್ಯ ನಟ ಡಿಂಗ್ರಿ ನಾಗರಾಜ್, ಮಿಮಿಕ್ರಿ ಗೋಪಿ, ಮುಖ್ಯಮಂತ್ರಿ ಚಂದ್ರು ಹಾಗೂ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾಯಮ್ಮರವರಿಗೆ ತಾಲೂಕಿನ ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ