ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮಹಮ್ಮದ್ ಫೈಗಂಬರರ ಜನ್ಮದಿನಾಚರಣೆ ಅಂಗವಾಗಿ ಸೆ.೧೪ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಹಿನ್ನಲೆಯಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಭಾನುವಾರ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಆಯಿಷಾ ಮಸೀದಿಯಲ್ಲಿ ರಕ್ತದಾನ ಶಿಬಿರ ಜರುಗಿತು.
ಭದ್ರಾವತಿ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮಹಮ್ಮದ್ ಫೈಗಂಬರರ ಜನ್ಮದಿನಾಚರಣೆ ಅಂಗವಾಗಿ ಸೆ.೧೪ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಹಿನ್ನಲೆಯಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಭಾನುವಾರ ನಗರದ ಬಿ.ಎಚ್ ರಸ್ತೆ, ಆಯಿಷಾ ಮಸೀದಿಯಲ್ಲಿ ರಕ್ತದಾನ ಶಿಬಿರ ಜರುಗಿತು.
ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರದ ಸಹಯೋಗದೊಂದಿಗೆ ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ ಯುವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡಿದರು. ರಕ್ತದಾನ ಮಹಾದಾನ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಂಡು ಸಮಾಜಮುಖಿ ಮಾನವೀಯ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಲಾಯಿತು.
ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಅಧ್ಯಕ್ಷ ಮೌಲಾನಾ ಸುಲ್ತಾನ್ ಬೇಗ್, ನಯಾಜ್, ಜುನೇದ್, ಮುಬಿನ್, ಹೈದರ್ ಮತ್ತು ಖದೀರ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ