ಭದ್ರಾವತಿ ತಾಲೂಕಿನ ಜ್ಞಾನವಿಕಾಸ ವಾತ್ಸಲ್ಯ ನಿಧಿ ಕಾರ್ಯಕ್ರಮದಡಿ ವಾತ್ಸಲ್ಯ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಪರಿಕರಗಳ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ನಡೆಸಲಾಯಿತು.
ಭದ್ರಾವತಿ : ತಾಲೂಕಿನ ಜ್ಞಾನವಿಕಾಸ ವಾತ್ಸಲ್ಯ ನಿಧಿ ಕಾರ್ಯಕ್ರಮದಡಿ ವಾತ್ಸಲ್ಯ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಪರಿಕರಗಳ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಗೀತಾ ಪರಿಕರಗಳನ್ನು ವಿತರಿಸಿ ಯೋಜನೆ ವತಿಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶ ಹೊಂದಲಾಗಿದೆ. ಮಕ್ಕಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯೋಜನೆ ಉದ್ದೇಶ ಸಾರ್ಥಕಗೊಳಿಸಬೇಕೆಂದರು.
ಯೋಜನೆ-೧ರ ಯೋಜನಾಧಿಕಾರಿ ಪ್ರಕಾಶ್ ನಾಯ್ಕ್ .ವೈ, ಜ್ಞಾನವಿಕಾಸ ಯೋಜನಾಧಿಕಾರಿ ರತ್ನ ಮತ್ತು ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗು ಫಲಾನುಭವಿಗಳು ಮತ್ತು ವಿದ್ಯಾರ್ಥಿಗಳು ಉಪಸಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ