ಭದ್ರಾವತಿ ಕುವೆಂಪು ವಿಶ್ವ ವಿದ್ಯಾಲಯದ ಕುಲಸಚಿವರಾಗಿ(ಮೌಲ್ಯಮಾಪನ) ಪ್ರಾಧ್ಯಾಪಕ ಪ್ರೊ. ಆರ್. ತಿಮ್ಮರಾಯಪ್ಪ ಗುರುವಾರ ಅಧಿಕಾರ ವಹಿಸಿಕೊಂಡರು.
ಭದ್ರಾವತಿ: ಇಲ್ಲಿನ ಕುವೆಂಪು ವಿಶ್ವ ವಿದ್ಯಾಲಯದ ಕುಲಸಚಿವರಾಗಿ(ಮೌಲ್ಯಮಾಪನ) ಪ್ರಾಧ್ಯಾಪಕ ಪ್ರೊ. ಆರ್. ತಿಮ್ಮರಾಯಪ್ಪ ಗುರುವಾರ ಅಧಿಕಾರ ವಹಿಸಿಕೊಂಡರು.
ಪ್ರೊ. ಆರ್. ತಿಮ್ಮರಾಯಪ್ಪರವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಇವರನ್ನು ಇದೀಗ ಕುವೆಂಪು ವಿಶ್ವ ವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಹುದ್ದೆಗೆ ನಿಯೋಜನೆಗೊಳಿಸಿದ್ದು, ಈ ಕುರಿತು ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾನಿಲಯಗಳು-೧) ಸರ್ಕಾರದ ಅಧೀನ ಕಾರ್ಯದರ್ಶಿ ಸಿ. ಶಶಿಕಲಾರವರು ಅಧಿಸೂಚನೆ ಹೊರಡಿಸಿದ್ದಾರೆ.
ಕುವೆಂಪು ವಿಶ್ವ ವಿದ್ಯಾಲಯದ ಕುಲಸಚಿವರಾಗಿ(ಮೌಲ್ಯಮಾಪನ) ಕರ್ತವ್ಯ ನಿರ್ವಹಿಸುತ್ತಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್.ಎಂ ಗೋಪಿನಾಥ್‌ರವರನ್ನು ಅವರ ಮಾತೃ ವಿಶ್ವವಿದ್ಯಾಲಯಕ್ಕೆ ಹಿಂದಿರುಗಿಸಲಾಗಿದೆ.
ನೂತನ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪರವರನ್ನು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹಾಗು ವಿಶ್ವ ವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ