ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ನಗರ ಮಂಡಲ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನ ಆಚರಣೆ ಅಂಗವಾರಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು.
ಭದ್ರಾವತಿ : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇವಲ ಪ್ರಧಾನಿಯಾಗಿ ಮಾತ್ರವಲ್ಲದೆ ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ಮಹಾನ್ ನಾಯಕರಾಗಿ ಭಾರತವನ್ನು ವಿಶ್ವಗುರುವಿನ ಸ್ಥಾನದಲ್ಲಿ ನಿಲ್ಲಿಸಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಬಣ್ಣಿಸಿದರು.
ಅವರು ಬುಧವಾರ ಭಾರತೀಯ ಜನತಾ ಪಕ್ಷ ನಗರ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶಕ್ಕೆ ನರೇಂದ್ರ ಮೋದಿಯವರ ಕೊಡುಗೆ ಅನನ್ಯವಾಗಿದ್ದು, ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲಿದೆ. ಇಂತಹ ಮಹಾನ್ ನಾಯಕನ ದಾರಿಯಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಸಹ ಸಾಗುವಂತಾಗಬೇಕು. ಆ ಮೂಲಕ ದೇಶ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದರು.
ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ದೇಶದ ಪ್ರಧಾನ ಸೇವಕರಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನ ಅತ್ಯಂತ ಶ್ರದ್ಧೆಯಿಂದ ಹಾಗೂ ಸೇವೆಯೇ ಸಂಘಟನೆ ಎಂಬ ಧ್ಯೇಯ ವಾಕ್ಯಕ್ಕೆ ಅನ್ವರ್ಥವಾಗುವಂತೆ ಪಕ್ಷದ ಕಾರ್ಯಾಲಯದಲ್ಲಿ ವಿಶೇಷ ಸೇವಾ ಕಾರ್ಯಕ್ರಮದೊಂದಿಗೆ ಚಾಲನೆ ನೀಡಲಾಗಿದ್ದು, ಅ.೨ರವರೆಗೆ ಅನೇಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಾ ಧನಂಜಯ ಸರ್ಜಿಯವರು ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಮಂಡಲ ಉಪಾಧ್ಯಕ್ಷೆ ಸುಲೋಚನಾ ಪ್ರಕಾಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪಕ್ಷದ ಪ್ರಮುಖರಾದ ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಚಾಲಕ ಜಿ. ಶಿವರಾಜ್, ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಮತ್ತು ರಘುರಾವ್ ರಕ್ತದಾನ ಶಿಬಿರದ ಸಂಚಾಲಕ ಧನುಷ್, ನಗರಸಭೆ ಸದಸ್ಯೆ ಅನುಪಮಾ ಚೆನ್ನೇಶ್, ಎಂ.ಎಸ್ ಸುರೇಶಪ್ಪ, ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ