ಭದ್ರಾವತಿ ನಗರದ ರಘುವೀರ್ ಕ್ರಿಕೆಟ್ ಅಕಾಡೆಮಿಯಿಂದ ಯುವ ಆಟಗಾರರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಾಜ್ಯಮಟ್ಟದ ದಸರಾ ಕಪ್–2025 ಕ್ರಿಕೆಟ್ ಪಂದ್ಯಾವ
ಭದ್ರಾವತಿ: ನಗರದ ರಘುವೀರ್ ಕ್ರಿಕೆಟ್ ಅಕಾಡೆಮಿಯಿಂದ ಯುವ ಆಟಗಾರರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಾಜ್ಯಮಟ್ಟದ ದಸರಾ ಕಪ್–2025 ಕ್ರಿಕೆಟ್ ಪಂದ್ಯಾವಳಿ ಅ.6ರವರೆಗೆ ಆಯೋಜಿಸಲಾಗಿದೆ.
12 ರಿಂದ 14 ವರ್ಷದೊಳಗಿನ ಹಾಗೂ 14 ರಿಂದ 16 ವರ್ಷದೊಳಗಿನ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ರಾಜ್ಯದ ವಿವಿಧ ನಗರಗಳಿಂದ ತಂಡಗಳು ಭಾಗವಹಿಸಿವೆ. ವಿ.ಐ.ಎಸ್.ಎಲ್ ಮತ್ತು ಎಂ.ಪಿ.ಎಂ ಕ್ರೀಡಾಂಗಣ ಸೇರಿದಂತೆ ನಗರದ ನಾಲ್ಕು ಪ್ರಮುಖ ಕ್ರೀಡಾಂಗಣಗಳಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು, ಇದು ಯುವ ಆಟಗಾರರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ಅಕಾಡೆಮಿ ತಿಳಿಸಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ