ರಾಜ್ಯದಲ್ಲಿ ಪ್ರತಿನಿತ್ಯ ಮಾಹಿತಿ ಹಕ್ಕು ಬಳಕೆದಾರರ ಮೇಲೆ ಕೊಲೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರಿಗೆ ಪ್ರತ್ಯೇಕ ಕಾನೂನು ರಚಿಸುವ ಮೂಲಕ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ಭದ್ರಾವತಿಯಲ್ಲಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ರಾಜ್ಯದಲ್ಲಿ ಪ್ರತಿನಿತ್ಯ ಮಾಹಿತಿ ಹಕ್ಕು ಬಳಕೆದಾರರ ಮೇಲೆ ಕೊಲೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರಿಗೆ ಪ್ರತ್ಯೇಕ ಕಾನೂನು ರಚಿಸುವ ಮೂಲಕ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಎಲ್ಲಾ ಮಾಹಿತಿ ತಿಳಿಯುವ ಹಕ್ಕು ಪ್ರಜೆಗಳಿಗಿದ್ದು, ಈ ಹಿನ್ನೆಲೆಯಲ್ಲಿ ಅ.೧೨, ೨೦೦೫ ರಂದು "ಮಾಹಿತಿ ಹಕ್ಕು ಕಾಯ್ದೆ"(ಆರ್.ಟಿ.ಐ) ಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡಲು ಈ ದೇಶದ ಪ್ರತಿಯೊಬ್ಬರಿಗೂ ಅಧಿಕಾರ ಇದೆ. ಆದರೆ ಎಲ್ಲಾದಕ್ಕೂ ಸಾಕ್ಷಿ, ಆಧಾರಗಳು ಬೇಕು. ಇದಕ್ಕೆ ಪೂರಕವಾಗಿ ಮಾಹಿತಿ ಪಡೆಯಲು ಪ್ರಜೆಗಳಿಗೆ ಕಲ್ಪಿಸಿ ಕೊಟ್ಟಿರುವ ಏಕೈಕ ವ್ಯವಸ್ಥೆ ``ಮಾಹಿತಿ ಹಕ್ಕು ಕಾಯ್ದೆ''ಯಾಗಿದೆ. ಪ್ರಸ್ತುತ ಭ್ರಷ್ಟ ಆಡಳಿತ ವ್ಯವಸ್ಥೆಯಿಂದಾಗಿ `ಮಾಹಿತಿ ಹಕ್ಕು ಕಾಯ್ದೆ ಬಳಕೆದಾರರಿಗೆ ರಕ್ಷಣೆ ಇಲ್ಲದಂತಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
ದೇಶದಲ್ಲಿ ಹಾಗು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು, ವಕೀಲರ ರಕ್ಷಣೆಗೆ ಹಾಗು ಪ್ರಾಣಿಗಳ ರಕ್ಷಣೆಗೂ ಪ್ರತ್ಯೇಕ ಕಾನೂನು ರಚಿಸಲಾಗಿದೆ. ಇದೆ ರೀತಿ ಮಾಹಿತಿ ಹಕ್ಕು ಬಳಕೆದಾರರ ಹಿತರಕ್ಷಣೆಗೂ ಪ್ರತ್ಯೇಕ ಕಾನೂನು ಜಾರಿಗೆ ತರುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತೀರ್ಥೇಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ. ಎನ್ ರಾಜು, ಕರ್ನಾಟಕ ಮಾಹಿತಿ ಹಕ್ಕು ವೇದಿಕೆಯ ಬಸವರಾಜ್, ವಕೀಲರಾದ ಭರತ್ ಬಿ.ಎಸ್. ಅಬ್ದುಲ್ ಖದೀರ್, ಡಿಎಸ್‌ಎಸ್ ಮುಖಂಡರಾದ ದಾಸರ ಕಲ್ಲಳ್ಳಿ ನಾಗರಾಜ್, ಇಮ್ರಾನ್, ಮಂಜುನಾಥ್, ವಿನೋದ್ ಇನ್ನಿತರರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ