ದಫೇದಾರ್ ಚಂದ್ರಶೇಖರ್
ಭದ್ರಾವತಿ : ನಗರದ ಹೊಸಮನೆ ನಿವಾಸಿ, ಶಿವಮೊಗ್ಗ ಕೆಎಸ್‌ಆರ್‌ಪಿ ಬೆಟಾಲಿಯನ್ ದಫೇದಾರ್ ಚಂದ್ರಶೇಖರ್(೪೪)ರವರು ಕಳೆದ ೪ ದಿನಗಳ ಹಿಂದೆ ಆಕಸ್ಮಿಕವಾಗಿ ಕಾಲು ಜಾರಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದಾರೆಂದು ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ರಾತ್ರಿ ಚಂದ್ರಶೇಖರ್ ನಗರದ ಬೈಪಾಸ್ ರಸ್ತೆ, ಉಜ್ಜಿನೀಪುರ ನಗರಸಭೆ ಪಂಪ್‌ಹೌಸ್ ಬಳಿ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು ಮೂವರು ಹೆಣ್ಣು ಮಕ್ಕಳು ಇದ್ದಾರೆ.
Rip
ಪ್ರತ್ಯುತ್ತರಅಳಿಸಿ