ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮಾದ್ಯಕ್ಷರಾದ ಫ್ರಾನ್ಸಿಸ್ ಸೆರಾವೋರವರು ಮೈಸೂರು ಧರ್ಮ ಕ್ಷೇತ್ರಕ್ಕೆ ವರ್ಗಾವಣೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಭದ್ರಾವತಿ ಮಾವಿನಕೆರೆ ಗ್ರಾಮದ ಕಿರಿಯ ಪುಷ್ಪ ಸಂತ ತೆರೇಸಾರ ದೇವಾಲಯದ ಭಕ್ತರ ಪರವಾಗಿ ಗುರುಗಳು ಮತ್ತು ಪದಾಧಿಕಾರಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ತಾಲೂಕಿನ ಮಾವಿನಕೆರೆ ಗ್ರಾಮದ ಕಿರಿಯ ಪುಷ್ಪ ಸಂತ ತೆರೇಸಾರ ಶತಮಾನೋತ್ಸವ ಮತ್ತು ದೇವಾಲಯದ ವಾರ್ಷಿಕ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು.
ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮಾದ್ಯಕ್ಷರಾದ ಫ್ರಾನ್ಸಿಸ್ ಸೆರಾವೋರವರು ಸಂಜೆ ದಿವ್ಯ ಬಲಿ ಪೂಜೆ ಮತ್ತು ಪೂಜಾ ವಿಧಿ-ವಿಧಾನ ನೆರವೇರಿಸಿದರು. ಶಿವಮೊಗ್ಗ ಧರ್ಮ ಕ್ಷೇತ್ರದ ಕುಲಪತಿ ಫಾದರ್ ಸ್ಟಿಫನ್ ಅಲ್ಬುಕಾರ್ಕ್ ಮತ್ತು ಧರ್ಮ ಕ್ಷೇತ್ರದ ಅನೇಕ ಧರ್ಮ ಗುರುಗಳೊಂದಿಗೆ ಧರ್ಮ ಕೇಂದ್ರದ ಗುರುಗಳಾದ ಫಾದರ್ ಪೌಲ್ ಕ್ರಾಸ್ತ, ಧರ್ಮಕೇಂದ್ರದ ಪದಾಧಿಕಾರಿಗಳು ಹಾಗು ಭಕ್ತರು ಪಾಲ್ಗೊಂಡಿದ್ದರು.
ಮೈಸೂರು ಧರ್ಮ ಕ್ಷೇತ್ರಕ್ಕೆ ವರ್ಗಾವಣೆಗೊಳ್ಳುತ್ತಿರುವ ಧರ್ಮಾದ್ಯಕ್ಷರಾದ ಫ್ರಾನ್ಸಿಸ್ ಸೆರಾವೋರವರನ್ನು ದೇವಾಲಯದ ಭಕ್ತರ ಪರವಾಗಿ ಗುರುಗಳು ಮತ್ತು ಪದಾಧಿಕಾರಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ