ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾ.ಪಂ., ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳು ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅ.೭ರ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ವೀರಶೈವ ಸಭಾಭವನದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಬಲ್ಕೀಶ್‌ಬಾನು, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಬಸವರಾಜ್ ಆನೆಕೊಪ್ಪ, ಶಿವಕುಮಾರ್ ಆರ್. ನಾಗೋಲಿ, ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಇ.ಬಿ ಗಣೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಉಪನ್ಯಾಸಕ ಡಾ.ಕೆ.ಎಚ್ ಕುಮಾರಸ್ವಾಮಿ ಉಪನ್ಯಾಸ ನೀಡಲಿದ್ದು, ಬೆಳಿಗ್ಗೆ ೯.೩೦ಕ್ಕೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಹುತ್ತಾ ಕಾಲೋನಿಯಿಂದವೀರಶೈವ ಸಭಾಭವನದವರಗೆ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ