ಭದ್ರಾವತಿ : ಎಐಟಿಯುಸಿ ಕಾರ್ಮಿಕ ಸಂಘಟನೆಯ ನಗರದ ನ್ಯೂಟೌನ್ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್ ಚುನಾವಣೆ ಅ.೨೬ರಂದು ನಡೆಯಲಿದ್ದು, ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ.
ಅ.೧೭ ನಾಮಪತ್ರ ಹಿಂಪಡೆಯುವ ದಿನವಾಗಿದ್ದು, ನಂತರ ೧೯ರಂದು ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದೆ. ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್ ಕಛೇರಿಯಲ್ಲಿ ೨೬ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಚುನಾವಣೆ ನಡೆಯಲಿದೆ. ಇದೆ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿ, ನ್ಯಾಯವಾದಿ ಎಸ್. ರವಿಕುಮಾರ್ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ