ಶಾಸಕ ಸಂಗಮೇಶ್ವರ್ ಸೇರಿದಂತೆ ೪೦ ಅಪೇಕ್ಷಿತರ ಮನೆಗಳಿಗೆ ತೆರಳಿ ಪ್ರದರ್ಶನ
ಭದ್ರಾವತಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಶಕುಂತಲಮ್ಮ ಮತ್ತು ಸಂಗಡಿಗರ ಅಂಟಿಗೆ ಪಂಟಿಗೆ ಮಹಿಳಾ ತಂಡವನ್ನು ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ) ಕನ್ನಡ ಶಾಲೆ ಸಮೀಪದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಅಂಟಿ ಪಂಟಿಗೆ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಭದ್ರಾವತಿ: ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಈ ಬಾರಿ ಸಹ ದೀಪಾವಳಿ ಸಂಭ್ರಮಕ್ಕೆ ಸಡಗರ ತರುವ ಮಲೆನಾಡಿನ ವಿಶಿಷ್ಟ ಜಾನಪದ ಕಲೆಯಾದ ಅಂಟಿಗೆ ಪಂಟಿಗೆ ಕಲಾ ತಂಡವನ್ನು ನಗರಕ್ಕೆ ಆಹ್ವಾನಿಸಲಾಗಿತ್ತು.
ತೀರ್ಥಹಳ್ಳಿ ತಾಲೂಕಿನ ಶಕುಂತಲಮ್ಮ ಮತ್ತು ಸಂಗಡಿಗರ ಅಂಟಿಗೆ ಪಂಟಿಗೆ ಮಹಿಳಾ ತಂಡವನ್ನು ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ) ಕನ್ನಡ ಶಾಲೆ ಸಮೀಪದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಅಂಟಿ ಪಂಟಿಗೆ ಪ್ರದರ್ಶನಕ್ಕೆ ಚಾಲನೆ ನೀಡಿದರು.
ನಂತರ ಕಲಾ ತಂಡ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಸುಮಾರು ೪೦ ಅಪೇಕ್ಷಿತರ ಮನೆಗಳಿಗೆ ಜ್ಯೋತಿಯೊಂದಿಗೆ ತೆರಳಿ ಅಂಟಿಗೆ ಪಂಟಿಗೆ ಕಲೆ ಪ್ರದರ್ಶಿಸಿತು. ಅಲ್ಲದೆ ಹಬ್ಬದ ಶುಭಾ ಕೋರುವ ಮೂಲಕ ಕುಟುಂಬದಲ್ಲಿ ಸಮೃದ್ಧಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿತು. ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ನೇತೃತ್ವವಹಿಸಿದ್ದರು.
ಅಂಟಿಗೆ ಪಂಟಿಗೆ ಈ ವಿಶಿಷ್ಟ ಜಾನಪದ ಕಲೆ ಪ್ರಸ್ತುತ ನಶಿಸಿ ಹೋಗುವ ಹಂತದಲ್ಲಿದ್ದು, ಇದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಉದ್ದೇಶದೊಂದಿಗೆ ಈ ಕಲಾ ತಂಡವನ್ನು ಆಹ್ವಾನಿಸಲಾಗಿತ್ತು.
ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ತಾಲೂಕಿನಿಂದ ಭದ್ರಾವತಿಗೆ ಆಗಮಿಸಿದ್ದ ಶಕುಂತಲಮ್ಮ ಮತ್ತು ಸಂಗಡಿಗರ ಅಂಟಿಗೆ ಪಂಟಿಗೆ ಮಹಿಳಾ ತಂಡ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಸುಮಾರು ೪೦ ಅಪೇಕ್ಷಿತರ ಮನೆಗಳಿಗೆ ಜ್ಯೋತಿಯೊಂದಿಗೆ ತೆರಳಿ ಅಂಟಿಗೆ ಪಂಟಿಗೆ ಕಲೆ ಪ್ರದರ್ಶಿಸಿತು. ಅಲ್ಲದೆ ಹಬ್ಬದ ಶುಭಾ ಕೋರುವ ಮೂಲಕ ಕುಟುಂಬದಲ್ಲಿ ಸಮೃದ್ಧಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿತು.
.jpg)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ