ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಭದ್ರಾವತಿ: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಸಂಘದ ಕಛೇರಿಯಲ್ಲಿ ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಅಲ್ಲದೆ ವಿಶೇಷವಾಗಿ ಸಸಿ ನೆಡುವ ಮೂಲಕ ಸಿಹಿ ಹಂಚಲಾಯಿತು. ಸಂಘದಿಂದ ನಾಡಹಬ್ಬ ಹಾಗು ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಉಪಾಧ್ಯಕ್ಷ ಸಂಪತ್, ಸಹ ಕಾರ್ಯದರ್ಶಿ ದಾಸ್, ನಿರ್ದೇಶಕರಾದ ನಿರಂಜನ್, ರಘು, ಸಂತೋಷ್(ಶಾಸ್ತ್ರಿ), ಫಿಲೀಪ್, ಮುರುಳಿ ಹಾಗು ೨೬ನೇ ವಾಡ್ ಯುವ ಮುಖಂಡ ಯತೀಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ