ಭದ್ರಾವತಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಇದೀಗ ೧೦೦ ವರ್ಷ ಪೂರೈಸಿದ್ದು, ಈ ಹಿನ್ನಲೆಯಲ್ಲಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳು ಜರುಗುತ್ತಿವೆ. ಇದಕ್ಕೆ ಪೂರಕವಾಗಿ ನಗರದ ಮಂಥನ ವತಿಯಿಂದ ನ.೧ರಂದು `ಸಂಘ ೧೦೦ ಮತ್ತು ಸಾಮರಸ್ಯ' ವಿಷಯ ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಿದೆ.
ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೨.೩೦ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಂಘದ ಹಿರಿಯ ಕಾರ್ಯಕರ್ತರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್‌ರವರು ತಮ್ಮ ಅನುಭವದ ನುಡಿಗಳನ್ನು ಹಂಚಿಕೊಳ್ಳಲಿದ್ದಾರೆ. ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರ ರಾವ್‌ರವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ