ಹುಟ್ಟುಹಬ್ಬದ ಅಂಗವಾಗಿ ಪೋಷಕಾಂಶಯುಕ್ತ ಹಣ್ಣು-ಬ್ರೆಡ್ ವಿತರಣೆ
ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ದಲಿತ ಸಮನ್ವಯ ಸಮಿತಿ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ವತಿಯಿಂದ ಮಂಗಳವಾರ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಪೋಷಕಾಂಶಯುಕ್ತ ಹಣ್ಣು ಹಾಗು ಬ್ರೆಡ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕರ್ನಾಟಕ ದಲಿತ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ವಿ. ವಿನೋದ್ ಆಗ್ರಹಿಸಿದರು.
ಅವರು ಮಂಗಳವಾರ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ದಲಿತ ಸಮನ್ವಯ ಸಮಿತಿ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಒಳರೋಗಿಗಳಿಗೆ ಪೋಷಕಾಂಶಯುಕ್ತ ಹಣ್ಣು ಹಾಗು ಬ್ರೆಡ್ ವಿತರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಸಂಗಮೇಶ್ವರ್‌ರವರು ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ಗುಂಡೂರಾವ್ ಅವರಿಗೆ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ ಅಗತ್ಯ ಸೌಲಭ್ಯಗಳು, ವೈದ್ಯರು, ಸಿಬ್ಬಂದಿಗಳನ್ನು ನೇಮಕಗೊಳಿಸುವಂತೆ ಹಾಗು ಭದ್ರಾ ಕಾಲೋನಿಯಲ್ಲಿ ನೂತನವಾಗಿ ತಾಯಿ-ಮಗು ಆಸ್ಪತ್ರೆ ನಿರ್ಮಿಸುವಂತೆ ಮನವಿ ಸಲ್ಲಿಸಿದ್ದರು. ತಕ್ಷಣ ಶಾಸಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಅಲ್ಲದೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ಸುದೀರ್ಘ ರಾಜಕೀಯ ಸೇವೆ ಗೌರವಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ದಲಿತ ಸಮನ್ವಯ ಸಮಿತಿ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳಾದ ನೇತ್ರಾವತಿ, ಸುನಿಲ್ ಕೋಠಿ, ಮೋಹನ್, ಶಬರೀಶ್, ಗೋವಿಂದಪ್ಪ, ಗಣೇಶ್, ಆಶೀರ್ವಾದ್, ರಾಜು, ಅರುಳ್, ನಾಗೇಂದ್ರಪ್ಪ, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕ್ರಪ್ಪ ಹಾಗು ವೈದ್ಯರು, ನರ್ಸ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ