ಸೋಮವಾರ, ಅಕ್ಟೋಬರ್ 6, 2025

ವಿಐಎಸ್‌ಎಲ್ ನಿವೃತ್ತ ನೌಕರ ನಿಜಾಮುದ್ದೀನ್ ನಿಧನ

ನಿಜಾಮುದ್ದೀನ್ 
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ನಿಜಾಮುದ್ದೀನ್(೭೬) ಸೋಮವಾರ ತಮ್ಮ ನಿವಾಸದಲ್ಲಿ ವಯೋ ಸಹಜವಾಗಿ ನಿಧನ ಹೊಂದಿದರು. 
    ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ನಗರದ ಅನ್ವರ್ ಕಾಲೋನಿಯಲ್ಲಿ ನಡೆಯಲಿದೆ. ಅಪ್ಪಟ ಕನ್ನಡ ಅಭಿಮಾನಿಯಾಗಿದ್ದ ಇವರು ನಿವೃತ್ತಿ ಹೊಂದಿದ್ದ ನಂತರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಅಲ್ಲದೆ ನಗರಸಭೆ ಸದಸ್ಯರಾಗಿ ಸಹ ಸೇವೆ ಸಲ್ಲಿಸಿದ್ದಾರೆ. ಉತ್ತಮ ಭಾಷಣಕಾರರಾಗಿದ್ದು, ಹಲವು ಸಭೆ-ಸಮಾರಂಭಗಳಲ್ಲಿ ಕನ್ನಡದಲ್ಲಿ ಉಪನ್ಯಾಸ ನೀಡುತ್ತಿದ್ದರು.  
    ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ