ಹಸಿರೀಕರಣದೆಡೆಗೆ ಅರಣ್ಯ ಇಲಾಖೆಯೊಡನೆ ಸೈಲ್-ವಿಐಎಸ್‌ಎಲ್ ನಡಿಗೆ
ಭದ್ರಾವತಿ ಸೈಲ್-ವಿಐಎಸ್‌ಎಲ್ ಕಾರ್ಖಾನೆಯ 'ಹಸಿರೀಕರಣದೆಡೆಗೆ' ಮತ್ತು 'ಸ್ವಚ್ಛತಾ ಹಿ ಸೇವಾ' ಉಪಕ್ರಮದ ಭಾಗವಾಗಿ ಸಾಮಾಜಿಕ ಅರಣ್ಯೀಕರಣದ ಅಡಿಯಲ್ಲಿ ಅರಣ್ಯ ಇಲಾಖೆಗೆ ಹೊಂಗೆ, ಹಲಸು, ಮಾವು ಮತ್ತು ಜಂಬೂ ನೇರಳೆ ೧೧೦೦ ಸಸಿಗಳನ್ನು ಹಸ್ತಾಂತರಿಸಲಾಯಿತು.
ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಅರಣ್ಯೀಕರಣ ಪ್ರಯತ್ನಗಳನ್ನು ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಖಾನೆಯ 'ಹಸಿರೀಕರಣದೆಡೆಗೆ' ಮತ್ತು 'ಸ್ವಚ್ಛತಾ ಹಿ ಸೇವಾ' ಉಪಕ್ರಮದ ಭಾಗವಾಗಿ ಸಾಮಾಜಿಕ ಅರಣ್ಯೀಕರಣದ ಅಡಿಯಲ್ಲಿ ಅರಣ್ಯ ಇಲಾಖೆಗೆ ಹೊಂಗೆ, ಹಲಸು, ಮಾವು ಮತ್ತು ಜಂಬೂ ನೇರಳೆ ೧೧೦೦ ಸಸಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಕಾರ್ಖಾನೆ ಆವರಣ ಮತ್ತು ನಗರ ಪ್ರದೇಶದಲ್ಲಿ ಅರಣ್ಯೀಕರಣಕ್ಕೆ ವಿಐಎಸ್‌ಎಲ್ ಕೊಡುಗೆ ನೀಡುವುದಲ್ಲದೆ, ಗಣರಾಜ್ಯೋತ್ಸವ, ಸೈಲ್ ದಿನಾಚರಣೆ, ಸಂಸ್ಥಾಪಕರ ದಿನಾಚರಣೆ, ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳ/ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ನುಗ್ಗೆ, ಪಪ್ಪಾಯಿ, ಕರಿಬೇವು ಸಸಿಗಳನ್ನು ಉಚಿತವಾಗಿ ವಿತರಿಸುವ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ಅಡಿಯಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಉಚಿತ ಬೀಜಗಳು/ಸಸಿಗಳ ವಿತರಣೆಯ ಮೂಲಕ ಈ ವರ್ಷ ಸುಮಾರು ೮,೫೦೦ ಸಸಿಗಳನ್ನು ೩,೦೦೦ ಬೀಜಗಳನ್ನು ವಿತರಿಸಿ, ಅರಣ್ಯೀಕರಣ ಪ್ರಯತ್ನಗಳನ್ನು ಪ್ರೋತ್ಸಾಹಿಸುವ ಕಾರ್ಖಾನೆಯ ಕಾರ್ಯ ಶ್ಲಾಘನೀಯ ಎಂದರು.
ಸೈಲ್ ಮತ್ತು ಅರಣ್ಯ ಇಲಾಖೆಯ ನಡುವಿನ ಸಂಬಂಧ ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಹಸಿರು ಮತ್ತು ಸ್ವಚ್ಛವಾಗಿಡುವಲ್ಲಿ ಬಹಳ ದೂರ ಸಾಗುತ್ತದೆ ಎಂದು ಅವರು ಆಶಿಸಿದರು. ಅಲ್ಲದೆ ಈ ನಿಟ್ಟಿನಲ್ಲಿ ಕಾರ್ಖಾನೆಯ ಭದ್ರತಾ ಇಲಾಖೆಯ ಪ್ರಯತ್ನಗಳನ್ನು ಅವರು ಪ್ರಶಂಸಿದರು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಅರಣ್ಯ ಇಲಾಖೆಗೆ ಸಸಿಗಳನ್ನು ಹಸ್ತಾಂತರಿಸಿದರು. ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್. ಸುರೇಶ್, ಮಹಾಪ್ರಬಂಧಕ(ಹೆಚ್.ಆರ್ & ಪಿ.ಆರ್) ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕ (ಪರಿಸರ ನಿರ್ವಹಣಾ ಇಲಾಖೆ) ಮುತ್ತಣ್ಣ ಸುಬ್ಬರಾವ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧ್ಯಕ್ಷರು, ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಡಾ. ಎಸ್.ಎನ್ ಸುರೇಶ್ ಮತ್ತು ಖಜಾಂಚಿ ಇಳಯರಾಜ, ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್, ಚನ್ನಗಿರಿ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರತ್ನಪ್ರಭಾ, ತರೀಕೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮರ್ ಭಾಷಾ, ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿ ಪ್ರದೀಪ್.ಎಂ.ಎಸ್., ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಕೆ.ಬಿ. ಹಾಗು ವಲಯ ಅರಣ್ಯಾಧಿಕಾರಿ, ಬಿ.ಆರ್ ದಿನೇಶ್ ಕುಮಾರ್ ಮತ್ತು ಉಪ ವಲಯ ಅರಣ್ಯಾಧಿಕಾರಿ ಶಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ