ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಭದ್ರಾವತಿ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಕಣ್ಮನ ಸೆಳೆಯಿತು.
ಭದ್ರಾವತಿ : ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಕಣ್ಮನ ಸೆಳೆಯಿತು.
ಶತಮಾನ ಪೂರೈಸಿರುವ ಆರ್‌ಎಸ್‌ಎಸ್ ೧೦೦ನೇ ವರ್ಷದ ವಿಜಯದಶಮಿ ಪಥ ಸಂಚಲನಕ್ಕೆ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭರದ ಸಿದ್ದತೆಗಳನ್ನು ಕೈಗೊಂಡಿತ್ತು.
ಪಥ ಸಂಚಲನ ಸಾಗುವ ಪ್ರಮುಖ ರಸ್ತೆಗಳು ಕೇಸರಿಮಯವಾಗಿ ಕಂಗೊಳಿಸಿದವು. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್‌ಗಳು ರಾರಾಜಿಸಿದವು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಜಗಜ್ಯೋತಿ ಬಸವೇಶ್ವರರು, ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹಿರ್ಷಿ, ದಾಸಶ್ರೇಷ್ಠ ಕನಕದಾಸರು, ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಮ್, ಚಂದ್ರಶೇಖರ್ ಅಜಾದ್, ಭಗತ್‌ಸಿಂಗ್, ರಾಣಾ ಪ್ರತಾಪ್, ಶಿವಾಜಿ ಮಹಾರಾಜ್, ಆರ್‌ಎಸ್‌ಎಸ್ ಸಂಸ್ಥಾಪಕರು ಸೇರಿದಂತೆ ಇನ್ನಿತರ ಮಹಾನ್ ವ್ಯಕ್ತಿಗಳ ರಸ್ತೆಯುದ್ದಕ್ಕೂ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳು ಗಮನ ಸೆಳೆದವು.
ಪಥ ಸಂಚಲನದಲ್ಲಿ ಸುಮಾರು ೬೫೦ ಗಣವೇಷಧಾರಿಗಳು, ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ನಡೆಯಿತು. ಅಲ್ಲದೆ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ವಾಹನಗಳಿಗೆ ಪುಷ್ಪಾಲಂಕಾರ ಕೈಗೊಳ್ಳಲಾಗಿತ್ತು.
ಪ್ರಮುಖ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು.
ಭಾರತೀಯ ಜನತಾ ಪಕ್ಷ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ವಿಶ್ವ ಹಿಂದೂ ಪರಿಷದ್, ಸಹಕಾರಿ ಭಾರತಿ ಸೇರಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಮಾರು ೩೩ಕ್ಕೂ ಹೆಚ್ಚು ಶಾಖೆಗಳು ಪಥ ಸಂಚಲನಕ್ಕೆ ಬೆಂಬಲ ಸೂಚಿಸಿ ಪಾಲ್ಗೊಂಡಿದ್ದವು.
ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಭದ್ರಾವತಿ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಹಿನ್ನಲೆಯಲ್ಲಿ ಪ್ರಮುಖ ರಸ್ತೆಗಳು, ವೃತ್ತಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ