ಗಣಪತಿ ವಿಸರ್ಜನೆ ವೇಳೆ ಘಟನೆ
ಭದ್ರಾವತಿ ರಬ್ಬರ್ ಕಾಡು ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ಹಲ್ಲೆಗೊಳಗಾದ ಯಲ್ಲಪ್ಪ ಮತ್ತು ಕೃಷ್ಣೇಗೌಡ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಭದ್ರಾವತಿ : ತಾಲೂಕಿನ ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ನಡೆದಿದ್ದು, ಪೇಪರ್ ಟೌನ್ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಯಲ್ಲಪ್ಪ ಗಾಯಗೊಂಡಿದ್ದಾರೆ.
ಗ್ರಾಮದ ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ. ಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡರವರ ಮನೆಯ ಮುಂದೆ ಗಲಾಟೆಯಾಗಿದೆ. ಹಳೆ ವೈಷಮ್ಯ ಹಿನ್ನಲೆ ಕೃಷ್ಣೇಗೌಡ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಲಾಗಿದೆ.
ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಈ ವೇಳೆ ಗಲಾಟೆಯನ್ನು ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ಯಲ್ಲಪ್ಪ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಕೃಷ್ಣೇಗೌಡ ಸಹ ಗಾಯಗೊಂಡಿದ್ದಾರೆ.
ಹಲ್ಲೆಗೊಳಗಾದ ಯಲ್ಲಪ್ಪ ಮತ್ತು ಕೃಷ್ಣೇಗೌಡ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಪೇಪರ್ ಟೌನ್ ಪೋಲೀಸ್ ಠಾಣೆಯಲ್ಲಿ ಪ್ರಕಾಶ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ