ಭದ್ರಾವತಿ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್‌ರವರು ಪ್ರತಿ ವರ್ಷದಂತೆ ಈ ಬಾರಿ ಸಹ ತಮ್ಮ ಜಮೀನಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮದಿಂದ ಆಚರಿಸಿದರು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್‌ರವರು ಪ್ರತಿ ವರ್ಷದಂತೆ ಈ ಬಾರಿ ಸಹ ತಮ್ಮ ಜಮೀನಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮದಿಂದ ಆಚರಿಸಿದರು.
ಭೂ ತಾಯಿಯನ್ನು ಹಸಿರು ತೋರಣಗಳಿಂದ ಸಿಂಗರಿಸಿ ಸಿಹಿ ತಿನಿಸುಗಳೊಂದಿಗೆ ಧಾರ್ಮಿಕ ಆಚರಣೆಗಳ ಮೂಲಕ ಆರಾಧಿಸಲಾಯಿತು. ಶ್ರೀಧರ್‌ರವರು ತಮ್ಮ ಜಮೀನಿನಲ್ಲಿ ವಿಭಿನ್ನ ರೀತಿಯ ಬೆಳೆಗಳನ್ನು ಬೆಳೆಯುವ ಮೂಲಕ ಹಲವು ಸಾಧನೆಗಳನ್ನು ಮಾಡಿದ್ದಾರೆ. ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದು, ಕುಟುಂಬಸ್ಥರೊಂದಿಗೆ ಭೂಮಿ ಹುಣ್ಣಿಮೆ ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ